w
Headlines
Home » ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

Screenshot 2026 09 07 15 38 32 399 com.openai.chatgpt edit

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

A three-year-old male bear allegedly died after coming into contact with an illegal electric fence around an areca plantation in Bhadravathi, with claims that its body was buried in a canal.

ಭದ್ರಾವತಿ: ಅಡಿಕೆ ತೋಟದ ಬೇಲಿಗೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಸುಮಾರು ಮೂರು ವರ್ಷದ ಗಂಡು ಕರಡಿ ಮೃತಪಟ್ಟಿದ್ದು, ನಂತರ ಅದರ ಮೃತದೇಹವನ್ನು ತೋಟದ ಕಾಲುವೆಯಲ್ಲಿ ಹೂತು ಹಾಕಿರುವ ಆರೋಪದ ಘಟನೆ ಭದ್ರಾವತಿ ತಾಲೂಕಿನ ಹೊಳೇಹೊನ್ನೂರು ಹೋಬಳಿಯ ಯಡೇಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಯಡೇಹಳ್ಳಿ ಗ್ರಾಮದ ಸರ್ವೇ ನಂಬರ್‌ 54ರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಜಮೀನಿನ ಮಾಲೀಕ ದೊಡ್ಡಸೀಗೆ ಗೋವಿಂದಪ್ಪ ಎಂಬಾತ ಅಡಿಕೆ ತೋಟದ ಬೇಲಿಗೆ ಅಕ್ರಮವಾಗಿ ನೇರ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದ ಎನ್ನಲಾಗಿದೆ.

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿದ ಪರಿಣಾಮ ಸುಮಾರು ಮೂರು ವರ್ಷದ ಗಂಡು ಕರಡಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬೆಳಕಿಗೆ ಬಾರದಂತೆ ಮುಚ್ಚಿಹಾಕುವ ಉದ್ದೇಶದಿಂದ ಮೃತಪಟ್ಟ ಕರಡಿಯ ಮೃತದೇಹವನ್ನು ತೋಟದಲ್ಲಿರುವ ಕಾಲುವೆಯಲ್ಲಿ ಹೂತು ಹಾಕಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಘಟನೆ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಾಂತಿಸಾಗರ ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ವಿದ್ಯುತ್‌ ಬೇಲಿ ಅಳವಡಿಕೆ ಹಾಗೂ ವನ್ಯಜೀವಿಯ ಸಾವಿನ ಕುರಿತು ಅರಣ್ಯ ಇಲಾಖೆ ತನಿಖೆ ಕೈಗೊಂಡಿದ್ದು, ಕಾನೂನು ಕ್ರಮ ಜರುಗಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಭದ್ರಾವತಿ 3ನೇ ಹೆಚ್ಚುವರಿ ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ವನ್ಯಜೀವಿಗಳ ಸಂಚಾರವಿರುವ ಪ್ರದೇಶಗಳಲ್ಲಿ ಜಮೀನುಗಳ ಸುತ್ತ ಅಕ್ರಮವಾಗಿ ವಿದ್ಯುತ್‌ ಬೇಲಿ ಅಳವಡಿಸುವುದು ಅತ್ಯಂತ ಅಪಾಯಕಾರಿ ಹಾಗೂ ಗಂಭೀರ ಅಪರಾಧವಾಗಿದೆ. ಇಂತಹ ಅಕ್ರಮ ಚಟುವಟಿಕೆಗಳು ವನ್ಯಜೀವಿಗಳ ಸಾವಿಗೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳುತ್ತಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.