ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

Bhadravati court sentences bike rider Nikhil to 1 year 1 month 15 days in jail and imposes ₹11,000 fine for causing pedestrian Bhojaraj’s death in a 2021 road accident.

ಭದ್ರಾವತಿ: ಅತಿ ವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸಿ ಪಾದಚಾರಿಯೊಬ್ಬರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಬೈಕ್ ಸವಾರನಿಗೆ ಭದ್ರಾವತಿಯ 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ನ್ಯಾಯಾಧೀಶೆ ನಾಸಿರ ಭಾನು ಅವರು ಸೆಪ್ಟೆಂಬರ್ 17ರಂದು ತೀರ್ಪು ಪ್ರಕಟಿಸಿದ್ದು, ಆರೋಪಿ ನಿಖಿಲ್‌ಗೆ ಒಟ್ಟು 1 ವರ್ಷ 1 ತಿಂಗಳು 15 ದಿನಗಳ ಜೈಲು ಶಿಕ್ಷೆ ಹಾಗೂ ₹11,000 ದಂಡ ವಿಧಿಸಿದ್ದಾರೆ.

ಅಪಘಾತದ ಹಿನ್ನೆಲೆ :

2021ರ ಡಿಸೆಂಬರ್ 27ರಂದು ಆನವೇರಿ ಕೈಮರ ರಸ್ತೆಯಲ್ಲಿ ಭೋಜರಾಜ್ ಎಂಬವರು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಆರೋಪಿ ನಿಖಿಲ್ ಬಜಾಜ್ ಪಲ್ಸರ್ ಬೈಕ್ ಅನ್ನು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಭೋಜರಾಜ್ ಅವರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿತ್ತು.

ಡಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ಭೋಜರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.

ಮೃತರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮೀಪತಿ ಅವರು ತನಿಖೆ ನಡೆಸಿ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ವೇಳೆ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ತಿಪ್ಪೇಶ್ ರಾವ್ ಅವರು ವಾದ ಮಂಡಿಸಿದ್ದರು. ಸಾಕ್ಷ್ಯಾಧಾರಗಳು ಹಾಗೂ ಪ್ರಕರಣದ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿ ತಪ್ಪಿತಸ್ಥನೆಂದು ಪರಿಗಣಿಸಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

45 minutes ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

59 minutes ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

2 days ago