ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

BJP leaders in Sagar have criticised MLA Belur Gopalakrishna for allegedly remaining absent from Teachers’ Day celebrations and giving priority to a protest march in a neighbouring taluk.

ಸಾಗರ: ದೇಶಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಗುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಗೈರಾಗಿರುವುದು ಶಿಕ್ಷಕ ಸಮುದಾಯಕ್ಕೆ ಹಾಗೂ ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ತೋರಿದ ಅಗೌರವವಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಮುಖ್ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಬಿಎಲ್‌ಎ-1 ಆರ್.ಟಿ. ಗೋಪಾಲ್ ಆರೋಪಿಸಿದ್ದಾರೆ.

ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶ ನಿರ್ಮಾಣದ ಮಹತ್ವದ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ದೊಡ್ಡದಾಗಿದೆ. ಸಮಾಜದ ಭವಿಷ್ಯವನ್ನು ರೂಪಿಸುವ ಶಿಕ್ಷಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್ 5ರಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಈ ಬಾರಿ ತಾಲೂಕಿನ ಶಿಕ್ಷಕಿಯೊಬ್ಬರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆತಿರುವುದು ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಇನ್ನಷ್ಟು ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕಾಗಿತ್ತು ಎಂದು ಅವರು ಅಭಿಪ್ರಾಯಪಟ್ಟರು.ಆದರೆ ಹೊಸನಗರದಲ್ಲಿ ಸೆಪ್ಟೆಂಬರ್ 5ರಂದು ನಡೆಯಬೇಕಿದ್ದ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 7ರಂದು ಆಚರಿಸಲು ಸೂಚಿಸಲಾಗಿದೆ ಎಂದು ಆರೋಪಿಸಿದ ಆರ್.ಟಿ. ಗೋಪಾಲ್, ಈ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಸೆಪ್ಟೆಂಬರ್ 5ರಂದು ಸಾಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೂ ಶಾಸಕ ಬೇಳೂರು ಗೋಪಾಲಕೃಷ್ಣ ಗೈರಾಗಿದ್ದರು ಎಂದು ಆರೋಪಿಸಿದರು. ಶಿಕ್ಷಕರಿಗೆ ಗೌರವ ಸಲ್ಲಿಸುವ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸದೇ, ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವುದು ಕ್ಷೇತ್ರದ ಜನತೆಗೆ ನಿರಾಸೆ ಮೂಡಿಸಿದೆ ಎಂದು ಅವರು ಟೀಕಿಸಿದರು.

ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಂದರೇಶ್ ಕೆರೆಹಳ್ಳಿ ಮಾತನಾಡಿ, ಶಿಕ್ಷಕರ ದಿನಾಚರಣೆಯಂತಹ ಮಹತ್ವದ ಕಾರ್ಯಕ್ರಮಕ್ಕಿಂತ ಪಕ್ಕದ ತಾಲೂಕಿನಲ್ಲಿ ನಡೆದ ಪಾದಯಾತ್ರೆಗೆ ಶಾಸಕರು ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಆರೋಪಿಸಿದರು.ಶಿಕ್ಷಕರು ಸಮಾಜದ ನಿರ್ಮಾತೃಗಳು. ಅವರ ಸೇವಾ ಮನೋಭಾವಕ್ಕೆ ಗೌರವ ಸಲ್ಲಿಸುವ ದಿನದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಭಾಗವಹಿಸುವುದು ಮುಖ್ಯವಾಗಿದೆ. ಆದರೆ ಶಿಕ್ಷಕರ ದಿನಾಚರಣೆಯಿಂದ ದೂರ ಉಳಿದಿರುವ ಕ್ರಮ ಶಿಕ್ಷಕ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಆನಂದ್ ಮೆಣಸೆ, ಜಿ.ಡಿ. ಮಲ್ಲಿಕಾರ್ಜುನ, ಮಂಜುಳಾ ಕೆ. ರಾವ್, ರಾಘವೇಂದ್ರ, ನಿವೃತ್ತ ಶಿಕ್ಷಕ ಧರ್ಮಪ್ಪ, ಗಣೇಶ್, ಮಹಮ್ಮದ್ ಹುಸೇನ್ ಹಾಗೂ ಇತರರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

41 minutes ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

7 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago