ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ
A car crashed into an electric pole near Nuligere on the Mastikatte road in Hosanagara while trying to avoid a wild animal. Five passengers, including three children, escaped safely.
ಹೊಸನಗರ : ರಸ್ತೆಗೆ ದಿಢೀರ್ ಅಡ್ಡಬಂದ ಕಾಡುಪ್ರಾಣಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಕಾರನ್ನು ಬದಿಗೆ ತಿರುಗಿಸಿದ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಮಾರ್ಗದ ನೂಲಿಗ್ಗೇರಿ ಬಳಿ ಭಾನುವಾರ ಬೆಳಗ್ಗೆ ನಡೆದಿದೆ.
ಸಾಗರದ ಪ್ರಕಾಶ್ ಎಂಬುವವರು ಮಣಿಪಾಲದಿಂದ ಸಾಗರದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನೂಲಿಗ್ಗೇರಿ ಸಮೀಪದ ರಸ್ತೆಯಲ್ಲಿ ಕಾಡುಪ್ರಾಣಿಯೊಂದು ಏಕಾಏಕಿ ಕಾರಿನ ಎದುರು ಬಂದಿದ್ದು, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದೆ ಎನ್ನಲಾಗಿದೆ. ಕಾರಿನ ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು, ಕೆಲವೇ ಕ್ಷಣಗಳಲ್ಲಿ ಕಾರಿನ ಮೇಲೆಯೇ ಬಿದ್ದಿದೆ. ಘಟನೆಯಿಂದ ಕಾರಿಗೆ ಹಾನಿಯಾಗಿದೆ.
ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಕಾರಿನಲ್ಲಿ ಚಾಲಕ ಪ್ರಕಾಶ್ ಸೇರಿದಂತೆ ಮೂವರು ಮಕ್ಕಳು ಸೇರಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ವಿದ್ಯುತ್ ಕಂಬ ನೇರವಾಗಿ ಕಾರಿನ ಮೇಲೆ ಬಿದ್ದಿದ್ದರೂ ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ನಗರ ಠಾಣೆ ಪಿಎಸ್‌ಐ ಶಿವಾನಂದ ಕೋಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…