ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

High drama unfolded in Hosanagara as forest officials attempted to evict a physically challenged youth from his residential plot. Angry villagers protested, leading to police intervention. Read the full ground report on Postman News Kannada.

ಹೊಸನಗರ: ತಾಲೂಕಿನ ಗರ್ತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆಕೇವಿಯಲ್ಲಿರುವ ಹಾಲಂದೂರು ಗ್ರಾಮದ ಸರ್ವೆ ನಂಬರ್ 49 ರಲ್ಲಿ ಬುಧವಾರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ಭಾರೀ ಹೈಡ್ರಾಮಾ ನಡೆದಿದೆ. ವಸತಿಹೀನ, ಅಂಗವಿಕಲ ಯುವಕನೋರ್ವನಿಗೆ ಸೇರಿದ ಸೈಟ್ ಜಾಗವನ್ನು ತೆರವುಗೊಳಿಸಲು ಅರಣ್ಯಾಧಿಕಾರಿಗಳು ಮುಂದಾದಾಗ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ವರದಿಯಾಗಿದೆ.

​ಹಾಲಂದೂರು ಗ್ರಾಮದ ನಿವಾಸಿ, ಲೋಕೇಶ್ ಅವರ ಪುತ್ರನಾದ ಅಂಗವಿಕಲ ಯುವಕ ಸುನೀಲ್ ಕುಮಾರ್ ಕಳೆದ ಹದಿನೈದು ವರ್ಷಗಳಿಂದ ಸ್ವಂತ ಸೂರಿಗಾಗಿ ಸಣ್ಣದೊಂದು ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದ. ಜೀವನ ನಿರ್ವಹಣೆಗೆ ಪರದಾಡುತ್ತಿರುವ ಈ ಯುವಕನಿಗೆ ಈ ಸಣ್ಣ ಜಾಗವೇ ಆಸರೆಯಾಗಿತ್ತು. ಆದರೆ, ದಿಢೀರನೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಫೀಲ್ಡ್‌ಗೆ ಇಳಿದ ಅರಣ್ಯ ಇಲಾಖೆ ಅಧಿಕಾರಿಗಳು, ಈ ಶೆಡ್ ಅನ್ನು ಕಿತ್ತೊಗೆದು ಆ ಜಾಗದಲ್ಲಿ ಗಿಡ ನೆಡಲು ಮುಂದಾಗಿದ್ದರು.

​ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಗ್ರಾಮಸ್ಥರು, ಅರಣ್ಯಾಧಿಕಾರಿಗಳ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಅಸಹಾಯಕ ಅಂಗವಿಕಲ ಯುವಕನ ಬೆಂಬಲಕ್ಕೆ ನಿಂತು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ಸೂಚನೆ ಅರಿತ ಹೊಸನಗರ ವಲಯ ಅರಣ್ಯಾಧಿಕಾರಿ (RFO) ಹಾಗೂ ಎಸಿಎಫ್ (ACF) ಅವರು ಗ್ರಾಮಸ್ಥರು ಮತ್ತು ಸುನೀಲ್ ಕುಮಾರ್ ಜೊತೆ ಮಾತುಕತೆ ನಡೆಸಿದರು. ಯುವಕನಿಗೆ ಮನೆ ಕಟ್ಟಿಕೊಳ್ಳಲು ಅಗತ್ಯವಿರುವಷ್ಟು ಜಾಗವನ್ನು ಬಿಟ್ಟು, ಉಳಿದ ಜಾಗದಲ್ಲಿ ಗಿಡ ನೆಡುವುದಾಗಿ ಭರವಸೆ ನೀಡಿದಾಗ ವಾತಾವರಣ ಕೊಂಚ ಶಾಂತವಾಗಿತ್ತು.

​ಆದರೆ, ಉಳಿದ ಜಾಗದಲ್ಲಿ ಗಿಡ ನೆಟ್ಟ ಕೂಡಲೇ ಅಧಿಕಾರಿಗಳು ತಮ್ಮ ಮಾತಿನಿಂದ ಹಿಂದೆ ಸರಿದಿದ್ದಾರೆ. ‘ನಿಮಗೆ ಜಾಗ ಬಿಟ್ಟುಕೊಡಲು ನಮಗೆ ಕಾನೂನಿನಲ್ಲಿ ಅಧಿಕಾರವಿಲ್ಲ, ನೀವು ಮೇಲಾಧಿಕಾರಿಗಳನ್ನು ಭೇಟಿ ಮಾಡಿ’ ಎಂದು ಸಬೂಬು ಹೇಳಲು ಮುಂದಾದರು. ಈ ಯೂ-ಟರ್ನ್ ನಡೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು, ಅರಣ್ಯ ಇಲಾಖೆ ನೆಟ್ಟಿದ್ದ ಗಿಡಗಳನ್ನು ಕಿತ್ತೊಗೆಯಲು ಮುಂದಾದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ ಉದ್ರಿಕ್ತರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು.

ಸದ್ಯಕ್ಕೆ ಯುವಕನಿಗೆ ಮನೆ ಕಟ್ಟಲು ಜಾಗವನ್ನು ಬಿಡಲಾಗಿದ್ದು, ಮೇಲಾಧಿಕಾರಿಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಆದರೆ ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾ ಅರಣ್ಯಾಧಿಕಾರಿಗಳು (DFO) ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಬಡ ಅಂಗವಿಕಲ ಯುವಕನಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ಕಾರ್ಯಾಚರಣೆ ವೇಳೆ ಅರಣ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸ್ ಪಡೆ ಹಾಜರಿತ್ತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

5 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

12 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

1 day ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

1 day ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

1 day ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

1 day ago