ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

A tragic tipper-bike accident near Nellibeedu in Sagar taluk has claimed the lives of father Neelakumar Jain and his daughter Archana Jain.

ಸಾಗರ : ತಾಲ್ಲೂಕಿನ ತುಮರಿ ಸಮೀಪದ ನೆಲ್ಲಿಬೀಡು ಗ್ರಾಮದಲ್ಲಿ ಮರಳು ತುಂಬಿದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಳೂರು ಗ್ರಾಮದ ನೀಲಕುಮಾರ್ ಜೈನ್ (45) ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ. ಇದೇ ಅಪಘಾತದಲ್ಲಿ ಅವರ ಪುತ್ರಿ ಅರ್ಚನಾ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದರು.

ಅರ್ಚನಾ ಜೈನ್ ಅವರು ಉಡುಪಿಯ ಖಾಸಗಿ ಹಾಸ್ಟೆಲ್‌ನಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು. ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಅವರು, ರಜೆ ಮುಗಿದ ಕಾರಣ ಮರಳಿ ಉಡುಪಿಗೆ ತೆರಳಬೇಕಾಗಿತ್ತು.

ಅವರನ್ನು ಉಡುಪಿಗೆ ಬಿಡುವ ಉದ್ದೇಶದಿಂದ ತಂದೆ ನೀಲಕುಮಾರ್ ಜೈನ್ ಅವರು ಆಗಸ್ಟ್ 25ರ ಮಂಗಳವಾರ ಬೆಳಗ್ಗೆ ಬೈಕ್‌ನಲ್ಲಿ ಕರೆದುಕೊಂಡು ಹೊರಟಿದ್ದರು. ಮಳೂರು ಗ್ರಾಮದಿಂದ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನೆಲ್ಲಿಬೀಡು ಸಮೀಪ ಈ ದುರ್ಘಟನೆ ಸಂಭವಿಸಿತ್ತು.

ನೆಲ್ಲಿಬೀಡು ಸರ್ಕಲ್ ಸಮೀಪ ಮರಳು ತುಂಬಿದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಅರ್ಚನಾ ಜೈನ್ ರಸ್ತೆಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪಘಾತದಲ್ಲಿ ನೀಲಕುಮಾರ್ ಜೈನ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆರಂಭದಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ನೀಲಕುಮಾರ್ ಜೈನ್ ಅವರು ಸೋಮವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಒಂದೇ ಅಪಘಾತದಲ್ಲಿ ಮೊದಲು ಪುತ್ರಿ ಅರ್ಚನಾ ಜೈನ್ ಅವರನ್ನು ಕಳೆದುಕೊಂಡಿದ್ದ ಕುಟುಂಬ ಇದೀಗ ತಂದೆ ನೀಲಕುಮಾರ್ ಜೈನ್ ಅವರನ್ನೂ ಕಳೆದುಕೊಂಡಿರುವುದು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ. ಮೃತ ನೀಲಕುಮಾರ್ ಜೈನ್ ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

1 hour ago

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

20 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

20 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

21 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

22 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

1 day ago