ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

Rippanpete Ganeshotsava 2026: Karnataka Prantha Hindu Rashtra Sena Samiti organizes the 59th public Ganapati festival from September 14 to 24 with religious and cultural programs.

​ರಿಪ್ಪನ್‌ಪೇಟೆ: ಭಕ್ತಿ ಮತ್ತು ಸಂಭ್ರಮದ ಸಮ್ಮಿಲನಕ್ಕೆ ರಿಪ್ಪನ್‌ಪೇಟೆ ಸಾಕ್ಷಿಯಾಗಲಿದ್ದು, ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ವತಿಯಿಂದ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ವೇದಿಕೆ ಸಜ್ಜಾಗಿದೆ. ಸೆಪ್ಟೆಂಬರ್ 14ರಿಂದ 24ರವರೆಗೆ ಬರೋಬ್ಬರಿ 11 ದಿನಗಳ ಕಾಲ ಶಿವಮೊಗ್ಗ ರಸ್ತೆಯ ವರಸಿದ್ಧಿವಿನಾಯಕ ದೇವಸ್ಥಾನದ ಹಿಂಭಾಗದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ವೈವಿಧ್ಯಮಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಗೇರಲಿವೆ.

​ಸಮಿತಿಯ ಅಧ್ಯಕ್ಷ ಸುಧೀಂದ್ರ ಪೂಜಾರಿ ಹಾಗೂ ಪ್ರಧಾನ ಕಾರ್ಯದರ್ಶಿ ನವೀನ್ ಎಂ. ನೇತೃತ್ವದಲ್ಲಿ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿದ್ದು, ಸೆಪ್ಟೆಂಬರ್ 14ರಂದು ಬೆಳಗ್ಗೆ ಸ್ವಾಮಿ ಸಿದ್ಧಿ ವಿನಾಯಕನ ಪ್ರತಿಷ್ಠಾಪನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ.

ಪ್ರತಿದಿನ ರಾತ್ರಿ 8.30ಕ್ಕೆ ರಂಜಿಸಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ:

ಸೆ. 15: ರಿಪ್ಪನ್‌ಪೇಟೆ ಶಾರದಾ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸುಶ್ರಾವ್ಯ ಸಂಗೀತ ಕಾರ್ಯಕ್ರಮ.

ಸೆ. 16: ಅಲಸೆ ಚಂಡಿಕೇಶ್ವರಿ ಮೇಳದ ಕಲಾವಿದರಿಂದ ‘ಶೂರ್ಪನಖಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ.

​ಸೆ. 17: ಗವಟೂರು ಸರ್ಕಾರಿ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ರಸಮಂಜರಿ.

​ಸೆ. 18: ಶಿಕ್ಷಕ ತೀರ್ಥಕುಮಾರ್ ಸಾರಥ್ಯದ ಹಂಸವೇಣಿ ಕಲಾ ತಂಡದಿಂದ ರಸಮಂಜರಿ.

​ಸೆ. 19: ಶಾರದಾಂಬ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಭರತನಾಟ್ಯ ಹಾಗೂ ಕುಂದಾಪುರದ ಕವಿತಾ ಆಚಾರ್ಯ ಮುದೂರು ಅವರಿಂದ ದಿಕ್ಸೂಚಿ ಭಾಷಣ.

​ಸೆ. 20: ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದಿಂದ ‘ಸಂಗೀತ ಗಾನ ಸಂಭ್ರಮ.

​ಸೆ. 21: ಉಪ್ಪಾಡಿ ತ್ರಿನೇತ್ರ ಕಲಾ ತಂಡದಿಂದ ಹೊಟ್ಟೆ ಹುಣ್ಣಾಗಿಸುವ ಹಾಸ್ಯ ನಾಟಕ ‘ತಿರುಪತಿ ಎಕ್ಸ್‌ಪ್ರೆಸ್’.

​ಸೆ. 22: ಸುಧಾ ಗೌಡ ಮತ್ತು ತಂಡದಿಂದ ಮಧುರ ಸಂಗೀತ ರಸಮಂಜರಿ.

​ಸೆ. 23: ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಕಣ್ಮನ ಸೆಳೆಯುವ ‘ನೃತ್ಯ ವೈಭವ’.

ಭವ್ಯ ರಾಜಬೀದಿ ಉತ್ಸವ:

ಸೆಪ್ಟೆಂಬರ್ 24ರಂದು ಮಧ್ಯಾಹ್ನ 12.30ಕ್ಕೆ ಗಣೇಶನ ವಿಸರ್ಜನಾ ಪೂಜೆ ನೆರವೇರಲಿದ್ದು, ತದನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀಯವರ ಅದ್ದೂರಿ ರಾಜಬೀದಿ ಉತ್ಸವ (ಶೋಭಾಯಾತ್ರೆ) ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಬಾರಿಯ ಉತ್ಸವವನ್ನು ಯಶಸ್ವಿಗೊಳಿಸುವಂತೆ ಸಮಿತಿ ಕೋರಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

23 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago