ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ

Thirthahalli DySP Dr. Bhanuprakash urges Rippanpete residents to celebrate Ganeshotsava peacefully within the legal framework. Strict ban on DJs and single-window clearance for pandal permissions announced.

ರಿಪ್ಪನ್‌ಪೇಟೆ: ಕೇವಲ ಧಾರ್ಮಿಕ ಆಚರಣೆಯಾಗಿ ಉಳಿಯದೆ, ಸರ್ವ ಜನಾಂಗವನ್ನು ಒಗ್ಗೂಡಿಸುವ ವೇದಿಕೆಯಾಗಿ ಗಣೇಶೋತ್ಸವ ಮೂಡಿಬರಬೇಕು. ಕಾನೂನು ಚೌಕಟ್ಟಿನೊಳಗೆ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆಗೆ ಹೆಸರಾದ ರಿಪ್ಪನ್‌ಪೇಟೆಯು ಇಡೀ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ತೀರ್ಥಹಳ್ಳಿ ಡಿವೈಎಸ್‌ಪಿ ಡಾ. ಭಾನುಪ್ರಕಾಶ್ ಮನವಿ ಮಾಡಿದ್ದಾರೆ.

​ಸ್ಥಳೀಯ ಜಿ.ಎಸ್.ಬಿ. ಕಲ್ಯಾಣ ಮಂದಿರದಲ್ಲಿ ಮುಂಬರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ‘ಪೊಲೀಸ್ ಶಾಂತಿ ಸಮಿತಿ ಸಭೆ’ಯಲ್ಲಿ ಭಾಗವಹಿಸಿ ಅವರು ಮಾತನಾಡಿ​ಬಾಲಗಂಗಾಧರನಾಥ ತಿಲಕರು ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ಎಲ್ಲ ಸಮಾಜವನ್ನು ಸಂಘಟಿಸುವ ಸದುದ್ದೇಶದಿಂದ ಗಣೇಶೋತ್ಸವವನ್ನು ಹುಟ್ಟುಹಾಕಿದರು. ಅದೇ ಹಾದಿಯಲ್ಲಿ ನಾವಿಂದು ಸಾಗಬೇಕಿದೆ. ರಿಪ್ಪನ್‌ಪೇಟೆ ಸರ್ವ ಜನಾಂಗದ ಶಾಂತಿಯ ತೋಟವಿದ್ದಂತೆ. ಈ ಸೌಹಾರ್ದತೆಯನ್ನು ಉಳಿಸಿಕೊಂಡು, ಸಾಂಸ್ಕೃತಿಕವಾಗಿ ಹಾಗೂ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಿ ಎಂದು ಸಂಘಟಕರಿಗೆ ಕಿವಿಮಾತು ಹೇಳಿದರು.

“ಪೊಲೀಸರು ಕೂಡ ನಿಮ್ಮಂತೆಯೇ ಮನುಷ್ಯರು ಖಾಕಿ ತೊಟ್ಟ ಮಾತ್ರಕ್ಕೆ ಮಾನವೀಯತೆ ಇಲ್ಲ ಎಂದಲ್ಲ. ಆದರೆ ಕಾನೂನು ಸುವ್ಯವಸ್ಥೆ ಕಾಪಾಡುವ ಅನಿವಾರ್ಯತೆ ನಮಗಿರುತ್ತದೆ. ಸಾರ್ವಜನಿಕರು ಸ್ನೇಹಬಾಂಧವ್ಯದಿಂದ ಇಲಾಖೆಯೊಂದಿಗೆ ಸಹಕರಿಸಬೇಕು,” ಎಂದು ಅವರು ಕೋರಿದರು.

ಸುಪ್ರೀಂಕೋರ್ಟ್ ಆದೇಶದನ್ವಯ ಕರ್ಕಶ ಶಬ್ದ ಮಾಡುವ ಡಿಜೆ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ನಿಯಮಾನುಸಾರ ಧ್ವನಿವರ್ಧಕ ಬಳಸಲು ಅವಕಾಶವಿದೆ. 10 ಗಂಟೆಯ ನಂತರ ಧ್ವನಿವರ್ಧಕಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕು. ಇದರ ಜೊತೆಗೆ, ಸಾಮಾಜಿಕ ಜಾಲತಾಣಗಳಲ್ಲಿ ಅನ್ಯ ಧರ್ಮೀಯರ ವಿರುದ್ಧ ಪ್ರಚೋದನಾಕಾರಿ ಸಂದೇಶಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್‌ಪಿ ಖಡಕ್ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಹೊಸನಗರ ತಹಶೀಲ್ದಾರ್ ಭರತ್‌ರಾಜ್ ಮಾತನಾಡಿ, “ಮಲೆನಾಡಿನ ಜನರು ಮೂಲತಃ ಶಾಂತಿಪ್ರಿಯರು. ಗಣೇಶ ಪ್ರತಿಷ್ಠಾಪನೆಯ ಪರವಾನಗಿಗಾಗಿ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಸ್ಥಳೀಯವಾಗಿಯೇ ಸಿಬ್ಬಂದಿಗಳನ್ನು ನೇಮಿಸಿ, ಏಕಗವಾಕ್ಷಿ ಮಾದರಿಯಲ್ಲಿ ಸುಲಭ ವ್ಯವಸ್ಥೆ ಕಲ್ಪಿಸಲಾಗಿದೆ,” ಎಂದು ಮಾಹಿತಿ ನೀಡಿದರು.

ಈ ಮಹತ್ವದ ಶಾಂತಿ ಸಭೆಯಲ್ಲಿ ಹೊಸನಗರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನರೇಂದ್ರ, ವೃತ್ತ ನಿರೀಕ್ಷಕ ಗೌಡರ ಗೌಡಪ್ಪ, ಪಿಎಸ್‌ಐ ರಾಜುರೆಡ್ಡಿ, ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಧೀಂದ್ರ ಪೂಜಾರಿ ಪ್ರಮುಖರಾದ ಆರ್.ಎ. ಚಾಬುಸಾಬ್, ಎಂ. ಸುರೇಶ್‌ಸಿಂಗ್, ಹಸನಬ್ಬ ಬ್ಯಾರಿ, ಎಂ.ಬಿ. ಮಂಜುನಾಥ, ಸುಂದರೇಶ್, ಆಸಿಫ್‌ ಭಾಷಾ, ಉಬೇದುಲ್ಲಾ ಷರೀಫ್, ನಿರೂಪ್ ಕುಮಾರ್, ಟಿ.ಆರ್. ಕೃಷ್ಣಪ್ಪ, ಆರ್. ರಾಘವೇಂದ್ರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಅಗ್ನಿಶಾಮಕ ದಳ, ಮೆಸ್ಕಾಂ, ಕಂದಾಯ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

1 hour ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

7 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

1 day ago

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

2 days ago