w
Headlines
Home » ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

Screenshot 2026 09 05 09 26 46 738 com.boedec.hoel.blur.face.photo edit
{“remix_data”:[],”remix_entry_point”:”challenges”,”source_tags”:[“local”],”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:{},”tools_used”:{“remove”:2},”is_sticker”:false,”edited_since_last_sticker_save”:true,”containsFTESticker”:false}

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

Forest Flying Squad officials seized 21 kg of deer meat and a Maruti Ertiga car in Ripponpet. The accused allegedly fled from the spot, and a case has been registered under the Wildlife Protection Act.

ರಿಪ್ಪನ್‌ಪೇಟೆ: ಮಾರಾಟ ಮಾಡುವ ಉದ್ದೇಶದಿಂದ ಕಾರಿನಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 21 ಕೆ.ಜಿ. ಜಿಂಕೆ ಮಾಂಸವನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವ ಘಟನೆ ಪಟ್ಟಣದ ಶಬರೀಶ ನಗರದಲ್ಲಿ ನಡೆದಿದೆ.

ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ನೇತೃತ್ವದಲ್ಲಿ ಸಿಬ್ಬಂದಿಗಳು ಶಬರೀಶ ನಗರ ಪ್ರದೇಶದಲ್ಲಿ ದಾಳಿ ನಡೆಸಿದರು. ಈ ವೇಳೆ ಮಾರುತಿ ಎರ್ಟಿಗಾ ಕಾರಿನಲ್ಲಿ ಎಲ್ಲಿಂದಲೋ ತಂದು ಸಂಗ್ರಹಿಸಿಡಲಾಗಿದ್ದ 21 ಕೆ.ಜಿ. ಜಿಂಕೆ ಮಾಂಸ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಅರಣ್ಯ ಅಧಿಕಾರಿಗಳು ಜಿಂಕೆ ಮಾಂಸದ ಜೊತೆಗೆ ಮಾರುತಿ ಎರ್ಟಿಗಾ ಕಾರನ್ನೂ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಶಬರೀಶ ನಗರ ನಿವಾಸಿ ಗುರುರಾಜ್, ಕಾರಗೋಡು ನಿವಾಸಿ ಹಾಗೂ ಹೊಸನಗರ ತಾಲೂಕು ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷ ಎಂದು ಗುರುತಿಸಲ್ಪಟ್ಟಿರುವ ಗಣೇಶ್ ಕೆ.ಜಿ. ಸೇರಿದಂತೆ ಆರೋಪಿಗಳು ದಾಳಿ ನಡೆಯುತ್ತಿದ್ದ ವೇಳೆ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದೆ.

ದಾಳಿಯಲ್ಲಿ ಅರಣ್ಯ ಸಂಚಾರಿ ದಳದ ಗಣೇಶ್ ಬಿ.ಸಿ., ಆಂಜನೇಯ ಪಾಟೀಲ್, ಚಂದ್ರಕಾಂತ್, ಸುರೇಶ್, ಪ್ರಮೋದಿನಿ ಹಾಗೂ ಹೆಚ್.ಬಿ. ದೊಡ್ಡಮನಿ ಭಾಗವಹಿಸಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.