w
Headlines
Home » ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

Screenshot 2026 09 03 11 59 47 826 com.openai.chatgpt edit

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

A peace meeting for Ganesh festival committees will be held on September 4, 2026, at GSB Community Hall in Ripponpete under the leadership of Thirthahalli ASP.

ರಿಪ್ಪನ್‌ಪೇಟೆ: ಮುಂಬರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗಣಪತಿ ಸೇವಾ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗಾಗಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ 4, 2026ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ ಜಿಎಸ್‌ಬಿ (ಗೌಡ ಸಾರಸ್ವತ) ಸಮುದಾಯ ಭವನದಲ್ಲಿ ಸಭೆ ನಡೆಯಲಿದೆ.

ತೀರ್ಥಹಳ್ಳಿಯ ಮಾನ್ಯ ಎಎಸ್‌ಪಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ, ಸಿಪಿಐ ಗೌಡಪ್ಪ ಗೌಡ ಹಾಗೂ ಪಿಎಸ್ ಐ ರಾಜುರೆಡ್ಡಿ ಭಾಗವಹಿಸಲಿದ್ದು ಮುಂಬರುವ ಗಣೇಶೋತ್ಸವವನ್ನು ಶಾಂತಿಯುತವಾಗಿ, ಸೌಹಾರ್ದಯುತವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಆಚರಿಸುವ ಕುರಿತು ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಲಾಗುವುದು.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಗಣಪತಿ ಸೇವಾ ಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರು ತಪ್ಪದೇ ಸಭೆಗೆ ಹಾಜರಾಗಿ, ಪೊಲೀಸ್ ಇಲಾಖೆಯ ಸಲಹೆ-ಸೂಚನೆಗಳನ್ನು ಪಡೆದುಕೊಂಡು ಗಣೇಶೋತ್ಸವವನ್ನು ಶಾಂತಿಯುತ ಹಾಗೂ ಸುವ್ಯವಸ್ಥಿತವಾಗಿ ಆಚರಿಸಲು ಸಹಕರಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ಕೋರಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.