ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ
Ripponpete Government Model Boys School is preparing to celebrate its historic centenary. A preliminary meeting of alumni and well-wishers will be held on September 3 at 2 PM.
ರಿಪ್ಪನ್‌ಪೇಟೆ: ಪಟ್ಟಣದ ಪ್ರತಿಷ್ಠಿತ ಹಾಗೂ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿರುವ ಸರ್ಕಾರಿ ಮಾದರಿ ಬಾಲಕರ ಪಾಠ ಶಾಲೆಯು ಇದೀಗ ಅಮೃತ ಮಹೋತ್ಸವ ಹಾಗೂ ಶತಮಾನೋತ್ಸವದ ಐತಿಹಾಸಿಕ ಸಂಭ್ರಮದಲ್ಲಿದೆ. ಈ ಮಹತ್ವದ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 3ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಶಾಲಾ ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ನೂರು ವರ್ಷಗಳನ್ನು ಪೂರೈಸಿರುವ ಈ ಅಕ್ಷರ ದೇಗುಲದ ಋಣ ತೀರಿಸುವ ಬಹುದೊಡ್ಡ ಜವಾಬ್ದಾರಿ ಇದೀಗ ಹಳೆಯ ವಿದ್ಯಾರ್ಥಿಗಳ ಮೇಲಿದೆ. ಕಾರ್ಯಕ್ರಮದ ರೂಪುರೇಷೆ, ಅಗತ್ಯ ಸಿದ್ಧತೆಗಳು, ಸಂಘಟನಾ ಜವಾಬ್ದಾರಿ ಹಾಗೂ ಸಲಹೆ-ಸಹಕಾರಗಳ ಕುರಿತು ಈ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗುವುದು.
ಒಂದು ಶತಮಾನದ ಇತಿಹಾಸವಿರುವ ಶಾಲೆಯ ಈ ಕಾರ್ಯಕ್ರಮ ಕೇವಲ ಆಚರಣೆಯಾಗದೆ, ಶಾಲೆಯ ಅಭಿವೃದ್ಧಿಗೆ ಪೂರಕವಾಗುವಂತೆ ಆಯೋಜಿಸುವ ಬಗ್ಗೆಯೂ ಸಮಾಲೋಚನೆ ನಡೆಯಲಿದೆ.
ಶಾಲೆಯಲ್ಲಿ ವ್ಯಾಸಂಗ ಮಾಡಿ ನಾಡಿನೆಲ್ಲೆಡೆ ವಿವಿಧ ಕ್ಷೇತ್ರಗಳಲ್ಲಿ ನೆಲೆಸಿರುವ ಎಲ್ಲಾ ಹಳೆಯ ವಿದ್ಯಾರ್ಥಿಗಳು ತಮ್ಮ ಕೆಲಸದ ನಡುವೆಯೂ ಸಮಯ ಮಾಡಿಕೊಂಡು ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಈ ಐತಿಹಾಸಿಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸುವಂತೆ ಶಾಲೆಯ ಮುಖ್ಯೋಪಾಧ್ಯಾಯರು ಪತ್ರಿಕಾ ಪ್ರಕಟಣೆಯಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…
ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…