ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

A calf was allegedly dragged for over 1.5 km after falling from a livestock vehicle near Mugoodthi, Ripponpete. The severely injured calf was rescued and shifted to a veterinary hospital.

ರಿಪ್ಪನ್‌ಪೇಟೆ: ಮೂಕಪ್ರಾಣಿಯೊಂದರ ಮೇಲಿನ ಅಮಾನವೀಯ ವರ್ತನೆಗೆ ಸಾಕ್ಷಿಯಾದ ಹೃದಯವಿದ್ರಾವಕ ಘಟನೆ ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿ ಬಳಿ ನಡೆದಿದೆ. ವಾಹನದಿಂದ ಆಯತಪ್ಪಿ ಕೆಳಗೆ ಬಿದ್ದ ಕರುವೊಂದು ಕತ್ತಿಗೆ ಕಟ್ಟಿದ್ದ ಹಗ್ಗದ ಮೂಲಕ ಸುಮಾರು ಒಂದೂವರೆ ಕಿಲೋಮೀಟರ್‌ಗೂ ಹೆಚ್ಚು ದೂರ ರಸ್ತೆಯಲ್ಲಿ ಎಳೆದೊಯ್ಯಲ್ಪಟ್ಟ ಪರಿಣಾಮ ಗಂಭೀರವಾಗಿ ಗಾಯಗೊಂಡಿದೆ.

ಶಿವಮೊಗ್ಗದಿಂದ ಅಶೋಕ್ ಲೈಲಾಂಡ್ ವಾಹನದಲ್ಲಿ ನಾಲ್ಕು ದನಗಳು ಹಾಗೂ ಒಂದು ಕರುವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಕರು ಆಯತಪ್ಪಿ ವಾಹನದಿಂದ ಕೆಳಗೆ ಬಿದ್ದಿದೆ. ಆದರೆ ಕರುವಿನ ಕತ್ತಿಗೆ ಕಟ್ಟಿದ್ದ ಹಗ್ಗ ವಾಹನಕ್ಕೆ ಸಂಪರ್ಕದಲ್ಲಿದ್ದ ಕಾರಣ, ವಾಹನ ಚಲಿಸುತ್ತಿದ್ದಂತೆ ಕರು ರಸ್ತೆಯ ಮೇಲೆ ಎಳೆದೊಯ್ಯಲ್ಪಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಟಾರ್ ರಸ್ತೆಯಲ್ಲಿ ಕರುವನ್ನು ಎಳೆದೊಯ್ಯಲಾಗಿದ್ದರಿಂದ ಅದರ ದೇಹದ ಚರ್ಮ ಸುಲಿದು, ತೀವ್ರ ರಕ್ತಸ್ರಾವವಾಗಿದೆ. ರಕ್ತದ ಮಡುವಿನಲ್ಲಿ ನರಳುತ್ತಿದ್ದ ಕರುವನ್ನು ಸ್ಥಳೀಯರು ಗಮನಿಸಿ ವಾಹನವನ್ನು ತಡೆದಿದ್ದಾರೆ.

ವಾಹನವನ್ನು ತಡೆದು ಚಾಲಕನನ್ನು ಪ್ರಶ್ನಿಸಿದ ವೇಳೆ ವಾಗ್ವಾದ ಉಂಟಾಗಿದ್ದು, ಸ್ಥಳೀಯರು ಚಾಲಕನ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಈ ನಡುವೆ, ಸ್ಥಳದಲ್ಲಿದ್ದ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ನಿಕಟಪೂರ್ವ ಸದಸ್ಯ ನಿರೂಪ್ ಕುಮಾರ್ ಅವರು ತಕ್ಷಣ ಸ್ಪಂದಿಸಿ ಖಾಸಗಿ ಪಶು ಪರಿವೀಕ್ಷಕ ಶರತ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗಾಯಗೊಂಡ ಕರುವಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ರಿಪ್ಪನ್‌ಪೇಟೆ ಪಶು ಆಸ್ಪತ್ರೆಗೆ ರವಾನಿಸಲಾಗಿದೆ.ಕರುವಿನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಮೂಕಪ್ರಾಣಿಯ ಮೇಲಿನ ಇಂತಹ ಅಮಾನವೀಯ ಕೃತ್ಯಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಘಟನೆ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

3 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

4 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

13 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

21 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

22 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

1 day ago