ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

Ripponpete Police have issued strict guidelines for Eid Milad and Ganeshotsava celebrations, warning sound system owners against unauthorized DJ and loudspeaker use.

ರಿಪ್ಪನ್‌ಪೇಟೆ: ಮುಂಬರುವ ಈದ್ ಮಿಲಾದ್ ಹಾಗೂ ಗಣೇಶೋತ್ಸವ ಹಬ್ಬಗಳ ಹಿನ್ನೆಲೆಯಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಿಪ್ಪನ್‌ಪೇಟೆ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ,ಇಲಾಖೆಯ ಪೂರ್ವಾನುಮತಿ ಇಲ್ಲದೆ ಯಾವುದೇ ಕಾರಣಕ್ಕೂ ಧ್ವನಿವರ್ಧಕ ಅಥವಾ ಡಿಜೆ ಬಳಸುವಂತಿಲ್ಲ ಎಂದು ಹೊಸನಗರ ವೃತ್ತ ನಿರೀಕ್ಷಕ ಗೌಡಪ್ಪ ಸೌಂಡ್ ಸಿಸ್ಟಂ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸೌಂಡ್ ಸಿಸ್ಟಂ ಮಾಲೀಕರಿಗಾಗಿ ಆಯೋಜಿಸಿದ್ದ ಮುಂಜಾಗ್ರತಾ ಸಭೆಯಲ್ಲಿ ಅವರು ಮಾತನಾಡಿ, ಹಬ್ಬಗಳ ಸಂದರ್ಭದಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಮಿತವಾದ ಶಬ್ದದಲ್ಲಿ ಧ್ವನಿವರ್ಧಕಗಳನ್ನು ಬಳಸಲು ಅವಕಾಶವಿದೆ , ಮೆರವಣಿಗೆಯಲ್ಲಿ ಬಳಸುವ ಟ್ರ್ಯಾಕ್ಟರ್ ಹಾಗೂ ಟ್ರೈಲರ್‌ಗಳು ಸೂಕ್ತ ದಾಖಲೆ ಮತ್ತು ಪರವಾನಗಿ ಹೊಂದಿರಬೇಕು. ವಾಹನ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಗಿ ಹೊಂದಿರಬೇಕು ಎಂದು ಸೂಚಿಸಿದರು.

ಆಯೋಜಕರು ಅಥವಾ ಸ್ಥಳೀಯ ಮುಖಂಡರ ಒತ್ತಡಕ್ಕೆ ಮಣಿದು ನಿಗದಿತ ಮಿತಿಗಿಂತ ಹೆಚ್ಚಿನ ಶಬ್ದದ ಡಿಜೆ ಅಥವಾ ಸೌಂಡ್ ಸಿಸ್ಟಂ ಅಳವಡಿಸಿದರೆ, ಸಂಬಂಧಪಟ್ಟ ಸೌಂಡ್ ಸಿಸ್ಟಂ ಮಾಲೀಕರ ವಿರುದ್ಧವೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಲ್ ಇನ್ಸ್ ಪೆಕ್ಟರ್ ಗೌಡಪ್ಪ ಗೌಡರ್ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಕಳೆದ ವರ್ಷ ನಿಯಮ ಉಲ್ಲಂಘಿಸಿದ ಕೆಲವು ಸೌಂಡ್ ಸಿಸ್ಟಂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂದು ತಿಳಿಸಿದರು. ಈ ವರ್ಷವೂ ಯಾವುದೇ ವ್ಯಕ್ತಿಯ ಒತ್ತಡಕ್ಕೆ ಒಳಗಾಗಿ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಹಬ್ಬಗಳ ಸುಗಮ ಮತ್ತು ಶಾಂತಿಯುತ ಆಚರಣೆಗಾಗಿ ಶೀಘ್ರದಲ್ಲೇ ಜಿಲ್ಲಾ ಮಟ್ಟದ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ ಆಯೋಜಿಸಲಾಗುವುದು. ಈ ಸಭೆಯಲ್ಲಿ ಗಣೇಶೋತ್ಸವ ಸೇರಿದಂತೆ ವಿವಿಧ ಹಬ್ಬಗಳ ಆಚರಣೆಗೆ ಸಂಬಂಧಿಸಿದ ನಿಯಮಾವಳಿಗಳ ಕುರಿತು ಚರ್ಚಿಸಿ ಅಂತಿಮ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಹೊರ ಊರಿನ ಸೌಂಡ್ ಸಿಸ್ಟಂಗಳ ವಿರುದ್ಧ ಕ್ರಮಕ್ಕೆ ಸ್ಥಳೀಯ ಸೌಂಡ್ ಮಾಲೀಕರ ಅಸಮಾಧಾನ

ಸಭೆಯಲ್ಲಿ ಸ್ಥಳೀಯ ಸೌಂಡ್ ಸಿಸ್ಟಂ ಮಾಲೀಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿ, ನಮ್ಮೂರಿನ ಹಾಗೂ ಸುತ್ತಮುತ್ತಲಿನ ಸೌಂಡ್ ಸಿಸ್ಟಂ ಮಾಲೀಕರು ಪೊಲೀಸ್ ಇಲಾಖೆಯ ನಿಯಮಾವಳಿಗಳನ್ನು ಒಗ್ಗಟ್ಟಾಗಿ ಪಾಲಿಸುತ್ತಿದ್ದೇವೆ. ಆದರೆ ಹೊರ ಊರುಗಳಿಂದ ಬರುವ ಕೆಲ ಸೌಂಡ್ ಸಿಸ್ಟಂ ಮಾಲೀಕರು ಕಾನೂನು ಮತ್ತು ನಿಯಮಗಳನ್ನು ಪಾಲಿಸದೆ ಬೇಕಾಬಿಟ್ಟಿಯಾಗಿ ಹೆಚ್ಚಿನ ಶಬ್ದದಲ್ಲಿ ಸೌಂಡ್ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ದೂರಿದರು.

ಇಂತಹ ಹೊರಗಿನ ಸೌಂಡ್ ಸಿಸ್ಟಂಗಳಿಗೆ ಕೆಲ ಆಯೋಜಕರು ಆದ್ಯತೆ ನೀಡುತ್ತಿರುವುದರಿಂದ ನಿಯಮ ಪಾಲಿಸುವ ಸ್ಥಳೀಯ ಮಾಲೀಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಕಾನೂನು ಉಲ್ಲಂಘಿಸುವ ಹೊರ ಊರಿನ ಸೌಂಡ್ ಸಿಸ್ಟಂ ಮಾಲೀಕರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಸೌಂಡ್ ಮಾಲೀಕರು ಆಗ್ರಹಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

1 hour ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

10 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

10 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

10 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

21 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

22 hours ago