ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ
Power outage in Ripponpete and surrounding areas on September 9, 2026, from 10 AM to 6 PM due to maintenance work at the 110/11 KV power distribution centre.
ರಿಪ್ಪನ್‌ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ನಾಳೆ ಬುಧವಾರ (09-09-2026) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
110/11 ಕೆ.ವಿ. ರಿಪ್ಪನ್‌ಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ಹಾಟ್‌ಲೈನ್ ವಿಭಾಗದ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಿಪ್ಪನ್‌ಪೇಟೆ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ 11 ಕೆ.ವಿ. ಫೀಡರ್‌ಗಳಲ್ಲಿ ನಿಗದಿತ ಸಮಯದಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?
ನಾಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿರುವ ಪ್ರಮುಖ ಪ್ರದೇಶಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗಳು ಹೀಗಿವೆ:
ರಿಪ್ಪನ್‌ಪೇಟೆ, ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ ಹಾಗೂ ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಿ, ವಿದ್ಯುತ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೆಪಿಟಿಸಿಎಲ್ (KPTCL) ಹಾಗೂ ಮೆಸ್ಕಾಂ ಇಲಾಖೆ ಮನವಿ ಮಾಡಿದೆ.