Headlines

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

Retired teacher and education enthusiast B. Shekarappa Master, 89, of Ripponpete has passed away after a brief illness. Rambhapuri Jagadguru has expressed condolences.

ರಿಪ್ಪನ್‌ಪೇಟೆ: ಪಟ್ಟಣದ ಚೌಡೇಶ್ವರಿ ಬೀದಿಯ ನಿವಾಸಿ, ನಿವೃತ್ತ ಶಿಕ್ಷಕ ಹಾಗೂ ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ (89) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಶಿಕ್ಷಕರಾಗಿ ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದ ಶೇಖರಪ್ಪ ಮಾಸ್ಟರ್ ಅವರು ಸಾವಿರಾರು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಮಕ್ಕಳಲ್ಲಿ ದೇಶಾಭಿಮಾನ ಹಾಗೂ ರಾಷ್ಟ್ರಾಭಿಮಾನವನ್ನು ಬೆಳೆಸುವ ಕಾರ್ಯಕ್ಕೆ ಅವರು ವಿಶೇಷ ಆದ್ಯತೆ ನೀಡುತ್ತಿದ್ದರು.

ನಿವೃತ್ತಿ ಹೊಂದಿದ ನಂತರವೂ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

ಮೃತರು ಹಿರಿಯ ಪತ್ರಕರ್ತ ಪ್ರಶಾಂತ್ ರಿಪ್ಪನ್‌ಪೇಟೆ ಸೇರಿದಂತೆ ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದೊಂದಿಗೆ ಬಿ. ಶೇಖರಪ್ಪ ಮಾಸ್ಟರ್ ಅವರು ನಿಕಟ ಸಂಪರ್ಕ ಹೊಂದಿದ್ದರು. ಅವರ ಅಗಲಿಕೆ ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಅಗಲಿದ ಬಿ. ಶೇಖರಪ್ಪ ಮಾಸ್ಟರ್ ಅವರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ನೀಡಲಿ ಎಂದು ಜಗದ್ಗುರುಗಳು ಪ್ರಾರ್ಥಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.

About The Author