ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

Retired government employees were specially honoured by senior citizens at Spandana Old Age Home in Guddadachannapur village of Shiggaon taluk, Haveri district.

ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದಲ್ಲಿರುವ ಸ್ಪಂದನಾ ವೃದ್ಧಾಶ್ರಮದಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ಹಿರಿಯ ನಾಗರಿಕರಿಂದ ವಿಶೇಷವಾಗಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪಿಎಸ್‌ಐ ಆಗಿ ನಿವೃತ್ತರಾದ ಪರಶುರಾಮ ನಿರೋಳ್ಳಿ ಮಾತನಾಡಿ, ಅಧಿಕಾರವು ಸಮಾಜದಲ್ಲಿನ ಓರೆ-ಕೋರೆಗಳನ್ನು ತಿದ್ದುವ ಜವಾಬ್ದಾರಿಯುತ ಸಾಧನವಾಗಿದೆ. ಯುವಕರು ದುಶ್ಚಟಗಳಿಗೆ ಒಳಗಾಗದೆ ನ್ಯಾಯಯುತವಾಗಿ ಸಮಾಜಸೇವೆ ಮಾಡಬೇಕು. ಸಮಾಜದಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ತೊಂದರೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪ್ರೌಢಶಾಲಾ ಶಿಕ್ಷಕರಾಗಿ ನಿವೃತ್ತರಾದ ಆರ್.ಎಚ್. ರೊಡ್ಡಣ್ಣವರ ಹಾಗೂ ಪೌರಕಾರ್ಮಿಕರಾಗಿ ನಿವೃತ್ತರಾದ ನಿಂಗಪ್ಪ ಹೊಸಮನಿ ಅವರು ಕೂಡ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸನ್ಮಾನ ಕಾರ್ಯಕ್ರಮದಲ್ಲಿ ಸ್ಪಂದನಾ ವೃದ್ಧಾಶ್ರಮದ ಅಧ್ಯಕ್ಷ ಮಹಾಬಲೇಶ ಹೋನಕೇರಿ, ಹೊನ್ನಪ್ಪ ಹೂಗಾರ, ಹಾವೇರಿ ಜಿಲ್ಲಾ ಇಂಟೆಲಿಜೆನ್ಸ್ ವಿಭಾಗದ ಪಿಎಸ್‌ಐ ಡಿ.ಎನ್. ಕುಡಲ್, ಸೋಮಶೇಖರ ಗೌರಿಮಠ, ಷಣ್ಮುಕಪ್ಪ ಕಲಣ್ಣವರ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಚಂದ್ರು ಮಾಯಣ್ಣವರ, ಶಿವಾನಂದ ಗುಡ್ಡನವರ, ಅಶೋಕ್ ಶೆಟ್ಟರ್ ಹಾಗೂ ಮದು ಜಂಗಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿರಿಯ ನಾಗರಿಕರು ನಿವೃತ್ತ ಸರ್ಕಾರಿ ನೌಕರರನ್ನು ಸನ್ಮಾನಿಸಿ ಗೌರವಿಸಿದರು.

ವರದಿ: ನಿಂಗರಾಜ್ ಕುಡಲ್, ಹಾವೇರಿ ಜಿಲ್ಲೆ – ಬಂಕಾಪುರ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

13 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

13 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

15 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

15 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

18 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

18 hours ago