ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ
BCA student Namitha, 21, was found dead in Huchchurayaswamy Lake in Shikaripura, Shivamogga. Police have registered a case and are investigating the incident.
ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತರನ್ನು ನಮಿತಾ (21) ಎಂದು ಗುರುತಿಸಲಾಗಿದ್ದು, ಅವರು ಶಿಕಾರಿಪುರದ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ನಮಿತಾ ಅವರು ಕಾಲೇಜು ಸಮವಸ್ತ್ರದಲ್ಲಿದ್ದ ಸಂದರ್ಭದಲ್ಲೇ ಕೆರೆಗೆ ಬಿದ್ದು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಪ್ರಕಟಗೊಂಡ ಪರೀಕ್ಷಾ ಫಲಿತಾಂಶದಲ್ಲಿ ಒಂದು ಸೆಮಿಸ್ಟರ್‌ನಲ್ಲಿ ಅವರು ಅನುತ್ತೀರ್ಣರಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಫಲಿತಾಂಶದಿಂದ ಮನನೊಂದು ಕೆರೆಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಶಿಕಾರಿಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…