ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

BJP launches a month-long Seva Sankalpa Abhiyan in Shivamogga to mark Prime Minister Narendra Modi’s birthday, beginning with special prayers at Kote Anjaneya Swamy Temple.

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ಒಂದು ತಿಂಗಳ ಕಾಲ ವಿವಿಧ ಸೇವಾ ಕಾರ್ಯಗಳನ್ನು ಒಳಗೊಂಡ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ.

ಅಭಿಯಾನದ ಅಂಗವಾಗಿ ಶಿವಮೊಗ್ಗ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಯುರಾರೋಗ್ಯ ಹಾಗೂ ದೀರ್ಘಾಯುಷ್ಯ ಲಭಿಸಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ಬಳಿಕ ದೇವಸ್ಥಾನದ ಆವರಣದಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಸೇವಾ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಎನ್.ಕೆ., ಶಿವಮೊಗ್ಗ ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಜಿಲ್ಲಾ ಉಪಾಧ್ಯಕ್ಷರಾದ ಜ್ಞಾನೇಶ್ವರ್ ಹಾಗೂ ಎನ್.ಜಿ. ನಾಗರಾಜ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಕೆ. ನವಲೆ ಹಾಗೂ ದಿನದಯಾಳು, ನಗರ ಪ್ರಭಾರಿ ಕುಪೇಂದ್ರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

43 minutes ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

60 minutes ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

1 hour ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

9 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

1 day ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

1 day ago