POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

Screenshot 2026 09 10 21 01 21 959 com.openai.chatgpt edit

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

Police conduct a sudden raid at an alleged illegal slaughterhouse in Budh Nagar, Shivamogga, and seize kilograms of meat. A suo motu case has been registered and investigation is underway.

ಶಿವಮೊಗ್ಗ: ನಗರದ ಬುದ್ಧನಗರ 1ನೇ ಕ್ರಾಸ್‌ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ ಕೆಜಿಗಟ್ಟಲೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಕಸಾಯಿಖಾನೆ ಹಾಗೂ ಮಾಂಸ ಮಾರಾಟದ ಕುರಿತು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸುಮಾರು 12 ದಿನಗಳ ಹಿಂದೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕಾರ್ಯಕರ್ತರು ಮತ್ತೆ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಬುದ್ಧನಗರದಲ್ಲಿ ಅಕ್ರಮವಾಗಿ ಮಾಂಸ ಮಾರಾಟ ನಡೆಯುತ್ತಿರುವ ಕುರಿತು ಮಾಹಿತಿ ನೀಡಿದ್ದಾರೆ.

ಮಾಹಿತಿ ಲಭ್ಯವಾದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕೆಜಿಗಟ್ಟಲೆ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದು, ಅಕ್ರಮ ಕಸಾಯಿಖಾನೆ ಹಾಗೂ ಮಾಂಸ ಮಾರಾಟದ ಕುರಿತು ತನಿಖೆ ಮುಂದುವರಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.