ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

Two people were arrested for allegedly selling marijuana from a car on Channel Road near Annanagar in Shivamogga. Police seized 1.42 kg of cannabis worth ₹77,000, a Honda Jazz car and ₹7,300 cash

ಶಿವಮೊಗ್ಗ: ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ನಗರದ ಅಣ್ಣಾನಗರ ಎಡಭಾಗದ ಚಾನಲ್ ರಸ್ತೆಯಲ್ಲಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಟಿಪ್ಪುನಗರದ ತೌಫೀಕ್ ಅಹಮದ್ (33) ಹಾಗೂ ಭದ್ರಾವತಿಯ ಸೈಯ್ಯದ್ ಅಪ್ಸರ್ (26) ಎಂಬುವರನ್ನು ಬಂಧಿಸಲಾಗಿದೆ.

ಪಿಎಸ್‌ಐ ಮಂಜುನಾಥ್ ಎನ್.ಕೆ. ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ ಅಂದಾಜು ₹77,000 ಮೌಲ್ಯದ 1 ಕೆಜಿ 420 ಗ್ರಾಂ ಗಾಂಜಾ, ಗಾಂಜಾ ಸಾಗಾಟಕ್ಕೆ ಬಳಸಿದ್ದ ಹೊಂಡಾ ಜಾಜ್ ಕಾರು ಹಾಗೂ ₹7,300 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

About The Author