ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ
Two people were arrested for allegedly selling marijuana from a car on Channel Road near Annanagar in Shivamogga. Police seized 1.42 kg of cannabis worth ₹77,000, a Honda Jazz car and ₹7,300 cash
ಶಿವಮೊಗ್ಗ: ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ನಗರದ ಅಣ್ಣಾನಗರ ಎಡಭಾಗದ ಚಾನಲ್ ರಸ್ತೆಯಲ್ಲಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಟಿಪ್ಪುನಗರದ ತೌಫೀಕ್ ಅಹಮದ್ (33) ಹಾಗೂ ಭದ್ರಾವತಿಯ ಸೈಯ್ಯದ್ ಅಪ್ಸರ್ (26) ಎಂಬುವರನ್ನು ಬಂಧಿಸಲಾಗಿದೆ.
ಪಿಎಸ್‌ಐ ಮಂಜುನಾಥ್ ಎನ್.ಕೆ. ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ ಅಂದಾಜು ₹77,000 ಮೌಲ್ಯದ 1 ಕೆಜಿ 420 ಗ್ರಾಂ ಗಾಂಜಾ, ಗಾಂಜಾ ಸಾಗಾಟಕ್ಕೆ ಬಳಸಿದ್ದ ಹೊಂಡಾ ಜಾಜ್ ಕಾರು ಹಾಗೂ ₹7,300 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…