ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್
Shivamogga rowdy sheeter Kulli Kiran was brutally murdered in Ramanakoppa. Police fired at main accused Umesh Naik after he allegedly attempted to escape custody.
ಶಿವಮೊಗ್ಗ: ನಗರದ ರಾಮೇನಕೊಪ್ಪ ಪ್ರದೇಶದಲ್ಲಿ ಸೀಗೆಹಟ್ಟಿ ನಿವಾಸಿ ಕುಳ್ಳಿ ಕಿರಣ್ (32) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ದುಷ್ಕರ್ಮಿಗಳು ಕಿರಣ್ ಅವರ ಎದೆ ಭಾಗಕ್ಕೆ ಮಾರಕಾಸ್ತ್ರಗಳಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದರು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಕಿರಣ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಪ್ರಮುಖ ಆರೋಪಿ ಉಮೇಶ್ ನಾಯ್ಕ್ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಘಟನೆ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು, ಕೊಲೆ ಪ್ರಕರಣದ ತನಿಖೆ ವೇಳೆ ಕಸ್ಟಡಿಯಲ್ಲಿದ್ದ ಆರೋಪಿ ಉಮೇಶ್ ರೆಸ್ಟ್‌ರೂಮ್ ಬಳಸುವ ನೆಪದಲ್ಲಿ ವಾಹನದಿಂದ ಇಳಿದು ಪೊಲೀಸ್ ಸಿಬ್ಬಂದಿ ತಮ್ಮಣ್ಣ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ತಿಳಿಸಿದ್ದಾರೆ.
ಈ ವೇಳೆ ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರು. ಆದರೂ ಆರೋಪಿ ಪೊಲೀಸರ ಮೇಲಿನ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ, ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಗುರುರಾಜ್ ಅವರು ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಎಸ್ಪಿ ನಿಖಿಲ್ ಮಾಹಿತಿ ನೀಡಿದ್ದಾರೆ.
ಪೊಲೀಸ್ ಫೈರಿಂಗ್‌ನಲ್ಲಿ ಗಾಯಗೊಂಡ ಆರೋಪಿ ಉಮೇಶ್‌ನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಐವರು ಆರೋಪಿಗಳು ಪೊಲೀಸರ ವಶಕ್ಕೆ
ಕುಳ್ಳಿ ಕಿರಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ಉಮೇಶ್ ಸೇರಿದಂತೆ ಅಪ್ಪು ಅಲಿಯಾಸ್ ಬಾಬು ರಾಜೇಂದ್ರ, ಸುನಿಲ್, ಭುವನ್ ಹಾಗೂ ಮನೋಜ್ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಉಮೇಶ್ ಕಿರಣ್ ಅವರಿಂದ ಪಡೆದಿದ್ದ ₹50 ಸಾವಿರ ಸಾಲದ ಹಣದ ವ್ಯವಹಾರವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಹಣ ಹಿಂದಿರುಗಿಸುವ ವಿಚಾರ ಹಾಗೂ ವೈಯಕ್ತಿಕ ಕಾರಣಗಳಿಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಅದು ಜಗಳಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…