ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ
A school bus lost control and crashed into a roadside tree near Sakkrebail in Shivamogga, leaving the driver and several children with minor injuries.
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶಿವಮೊಗ್ಗ ಸಮೀಪದ ಸಕ್ರೆಬೈಲ್‌ನಲ್ಲಿ ನಡೆದಿದೆ.
ನಗರದ ನ್ಯೂ ಮಂಡಳಿಯಲ್ಲಿರುವ ಖಾಸಗಿ ಶಾಲೆಯೊಂದಕ್ಕೆ ಸೇರಿದ ಬಸ್ ಸಕ್ರೆಬೈಲ್ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಎದುರಿನಿಂದ ಲಾರಿಯೊಂದು ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಚಾಲಕ ಬಸ್ಸನ್ನು ರಸ್ತೆ ಬದಿಗೆ ತೆಗೆದುಕೊಂಡಿದ್ದಾರೆ.
ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.
ಅಪಘಾತದ ಪರಿಣಾಮವಾಗಿ ಬಸ್ಸಿನಲ್ಲಿದ್ದ ಕೆಲವು ಮಕ್ಕಳಿಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯ ಅಥವಾ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…