w
Headlines
Home » ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

Screenshot 2026 09 16 16 46 26 879 com.openai.chatgpt edit

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

Two traffic police personnel in Shivamogga were transferred after a video allegedly showing them carrying MLA Channabasappa on their shoulders during a Ganesh immersion procession went viral on social media.

ಶಿವಮೊಗ್ಗ, ಸೆಪ್ಟೆಂಬರ್ 16: ಗಣೇಶ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಶಾಸಕ ಚನ್ನಬಸಪ್ಪ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಕುಣಿದಿದ್ದ ಇಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವರ್ಗಾವಣೆ ಮಾಡಿದ್ದಾರೆ.

ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗಿದ್ದು, ಬಳಿಕ ವಿಸರ್ಜನಾ ಪೂರ್ವ ಮೆರವಣಿಗೆ ಆಯೋಜಿಸಲಾಗಿತ್ತು. ಗಣೇಶ ಮೂರ್ತಿಯನ್ನು ತುಂಗಾ ನದಿಯಲ್ಲಿ ವಿಸರ್ಜಿಸಲು ಮೆರವಣಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಮೇಶ್ವರ ದೇವಾಲಯದ ಬಳಿ ಶಾಸಕ ಚನ್ನಬಸಪ್ಪ ಅವರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಗಣೇಶ ಮತ್ತು ಪ್ರಕಾಶ್ ಅವರು ಶಾಸಕರನ್ನು ಹೆಗಲ ಮೇಲೆ ಹೊತ್ತುಕೊಂಡು ಕುಣಿದಿದ್ದರು ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವಿಡಿಯೋ ವೈರಲ್ ಆದ ಬೆನ್ನಲ್ಲೇ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಯಿಂದ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ. ಗಣೇಶ ಅವರನ್ನು ಆಗುಂಬೆಗೆ ಹಾಗೂ ಪ್ರಕಾಶ್ ಅವರನ್ನು ಆನವಟ್ಟಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ಸಿಬ್ಬಂದಿಯ ಈ ನಡೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ವರ್ಗಾವಣೆ ಕ್ರಮ ಕೈಗೊಳ್ಳಲಾಗಿದೆ. ರಾಜಕಾರಣಿಗಳೊಂದಿಗೆ ಪೊಲೀಸ್ ಸಿಬ್ಬಂದಿ ಬಹಿರಂಗವಾಗಿ ಆತ್ಮೀಯವಾಗಿ ಕಾಣಿಸಿಕೊಂಡು ಇಲಾಖೆಗೆ ಮುಜುಗರ ಉಂಟುಮಾಡುವಂತಹ ಘಟನೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಎಸ್‌ಪಿ ಅವರು ಈ ಕ್ರಮದ ಮೂಲಕ ಇಲಾಖೆಯ ಸಿಬ್ಬಂದಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಎನ್ನಲಾಗುತ್ತಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.