POSTMAN NEWS

ನೈಜ ಸುದ್ದಿ ನೇರ ಬಿತ್ತರ..

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Screenshot 2026 09 10 21 13 14 257 com.openai.chatgpt edit

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

19-year-old woman jumps into Tunga River from railway bridge in Shivamogga. Fire and Rescue Services personnel safely rescue her using a rubber boat.

ಶಿವಮೊಗ್ಗ: ನಗರದ ರೈಲ್ವೆ ಸೇತುವೆ ಮೇಲಿನಿಂದ 19 ವರ್ಷದ ಯುವತಿಯೊಬ್ಬರು ತುಂಗಾ ನದಿಗೆ ಹಾರಿದ ಘಟನೆ ಇಂದು ಸಂಜೆ ನಡೆದಿದೆ. ಅದೃಷ್ಟವಶಾತ್‌ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ನದಿಯಲ್ಲಿ ನೀರಿನ ಹರಿವು ಕಡಿಮೆ ಇದ್ದ ಕಾರಣ ಯುವತಿ ನೀರಿನ ಮಧ್ಯಭಾಗದಲ್ಲಿದ್ದ ಬಂಡೆಯೊಂದರ ಬಳಿ ಗಿಡಗಳ ಆಸರೆಯಲ್ಲಿ ನಿಂತಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರಬ್ಬರ್‌ ಬೋಟ್‌ ಸಹಾಯದಿಂದ ಯುವತಿಯನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.

ನಂತರ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಈ ಘಟನೆ ಕೋಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.