ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ
19-year-old woman jumps into Tunga River from railway bridge in Shivamogga. Fire and Rescue Services personnel safely rescue her using a rubber boat.
ಶಿವಮೊಗ್ಗ: ನಗರದ ರೈಲ್ವೆ ಸೇತುವೆ ಮೇಲಿನಿಂದ 19 ವರ್ಷದ ಯುವತಿಯೊಬ್ಬರು ತುಂಗಾ ನದಿಗೆ ಹಾರಿದ ಘಟನೆ ಇಂದು ಸಂಜೆ ನಡೆದಿದೆ. ಅದೃಷ್ಟವಶಾತ್ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ನದಿಯಲ್ಲಿ ನೀರಿನ ಹರಿವು ಕಡಿಮೆ ಇದ್ದ ಕಾರಣ ಯುವತಿ ನೀರಿನ ಮಧ್ಯಭಾಗದಲ್ಲಿದ್ದ ಬಂಡೆಯೊಂದರ ಬಳಿ ಗಿಡಗಳ ಆಸರೆಯಲ್ಲಿ ನಿಂತಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರಬ್ಬರ್ ಬೋಟ್ ಸಹಾಯದಿಂದ ಯುವತಿಯನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.
ನಂತರ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಈ ಘಟನೆ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…