ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ
The Talaguppa-Bengaluru train was halted near Nevaturu after a tree fell on the railway tracks near Arasalu. Passengers returning to work after the festival are facing delays as clearing operations continue.
ಶಿವಮೊಗ್ಗ: ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲು ಮಾರ್ಗಮಧ್ಯೆ ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಮರ ಬಿದ್ದ ಪರಿಣಾಮ ದಿಢೀರ್ ಸ್ಥಗಿತಗೊಂಡಿದೆ. ಇದರಿಂದಾಗಿ ಹಬ್ಬವನ್ನು ಮುಗಿಸಿ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಮರಳುತ್ತಿದ್ದ ನೂರಾರು ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ.
ಬೆಳಿಗ್ಗೆ 5.20ಕ್ಕೆ ಸರಿಯಾಗಿ ತಾಳಗುಪ್ಪದಿಂದ ಹೊರಟಿದ್ದ ಈ ರೈಲು, ನಿಗದಿಯಂತೆ ಬೆಳಿಗ್ಗೆ 07 ಗಂಟೆಗೆ ಶಿವಮೊಗ್ಗ ಹಾಗೂ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ನಗರವನ್ನು ತಲುಪಬೇಕಾಗಿತ್ತು. ಆದರೆ, ಅರಸಾಳು ಬಳಿ ಮರ ಬಿದ್ದಿರುವ ಮಾಹಿತಿ ರೈಲ್ವೆ ಅಧಿಕಾರಿಗಳಿಗೆ ಲಭ್ಯವಾದ ತಕ್ಷಣ, ಯಾವುದೇ ಅನಾಹುತವಾಗದಂತೆ ಎಚ್ಚರಿಕೆ ವಹಿಸಿ ರೈಲನ್ನು ಮುಂಚಿತವಾಗಿಯೇ ಆನೆಕೆರೆ ಮತ್ತು ನೆವಟೂರು ಗ್ರಾಮಗಳ ಮಧ್ಯಭಾಗದಲ್ಲಿ ಸುರಕ್ಷಿತವಾಗಿ ನಿಲ್ಲಿಸಲಾಗಿದೆ.
ಹಬ್ಬಗಳ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಜನರು, ರಜೆ ಮುಗಿಸಿ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದರು. ರೈಲು ಹಠಾತ್ತಾಗಿ ಮಾರ್ಗಮಧ್ಯೆ ನಿಂತಿರುವ ಕಾರಣ, ಕಚೇರಿಗಳಿಗೆ ತೆರಳಬೇಕಿದ್ದ ಉದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ನಿಗದಿತ ಸಮಯಕ್ಕೆ ತಲುಪಲಾಗದೆ ಪ್ರಯಾಣಿಕರು ಕಂಗಾಲಾಗಿದ್ದಾರೆ.
ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳಿಯ ಮೇಲಿರುವ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ಸಾಗುತ್ತಿದ್ದು, ಸಂಪೂರ್ಣವಾಗಿ ಮರ ತೆರವು ಮಾಡಲು ಇನ್ನೂ ಕನಿಷ್ಠ ಒಂದು ಗಂಟೆ ಕಾಲಾವಕಾಶ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಅಲ್ಲಿಯವರೆಗೆ ಪ್ರಯಾಣಿಕರು ಕಾದು ಕುಳಿತುಕೊಳ್ಳುವುದು ಅನಿವಾರ್ಯವಾಗಿದ್ದು, ಕಾರ್ಯಾಚರಣೆ ಮುಗಿದ ತಕ್ಷಣವೇ ರೈಲು ತನ್ನ ಪ್ರಯಾಣವನ್ನು ಮುಂದುವರಿಸಲಿದೆ.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…