ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

A 7.5-foot-long, 10 kg giant python was safely rescued from between plastic bags behind Bhairava Transport Factory near Thirthahalli by snake rescuer Snake Kiran.

ತೀರ್ಥಹಳ್ಳಿ: ಪಟ್ಟಣದ ಮುಖ್ಯ ರಸ್ತೆಯ ಸಮೀಪದ ಭೈರವ ಟ್ರಾನ್ಸ್‌ಪೋರ್ಟ್ ಫ್ಯಾಕ್ಟರಿ ಹಿಂಭಾಗದಲ್ಲಿ ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿಕೊಂಡಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ನಿನ್ನೆ ಸಂಜೆ ಸುಮಾರು 4:30ರ ವೇಳೆಗೆ ಸ್ಥಳದಲ್ಲಿದ್ದ ಸಾರ್ವಜನಿಕರು ಪ್ಲಾಸ್ಟಿಕ್ ಚೀಲಗಳ ನಡುವೆ ಹೆಬ್ಬಾವು ಮಲಗಿರುವುದನ್ನು ಗಮನಿಸಿ ಆತಂಕಗೊಂಡಿದ್ದಾರೆ. ತಕ್ಷಣವೇ ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ನೇಕ್ ಕಿರಣ್ ಅವರು ಸಂಜೆ ಸುಮಾರು 5:30ರಿಂದ 5:45ರ ಅವಧಿಯಲ್ಲಿ ಕಾರ್ಯಾಚರಣೆ ನಡೆಸಿ, ಸುಮಾರು 7.5 ಅಡಿ ಉದ್ದ ಹಾಗೂ 10 ಕೆಜಿ ತೂಕದ ಬೃಹತ್ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ.

ಬಳಿಕ ಫ್ಯಾಕ್ಟರಿ ಮಾಲೀಕರಿಗೆ ಅಗತ್ಯ ಮಾಹಿತಿ ನೀಡಿದ ಅವರು, ರಕ್ಷಿಸಲಾದ ಹೆಬ್ಬಾವಿನ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಇಲಾಖೆಯ ಮಾರ್ಗಸೂಚಿಯಂತೆ ಸುರಕ್ಷಿತ ಪ್ರದೇಶದಲ್ಲಿ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ಹೆಬ್ಬಾವನ್ನು ಕಂಡು ಆತಂಕಗೊಂಡಿದ್ದ ಸ್ಥಳೀಯರು, ಉರಗ ರಕ್ಷಕ ಸ್ನೇಕ್ ಕಿರಣ್ ಅವರ ಸಮಯೋಚಿತ ಕಾರ್ಯಾಚರಣೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

2 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

9 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

9 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

9 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

21 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

22 hours ago