ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು

A 27-year-old mechanic was killed in a tragic bus and bike collision near Unturkatte Kaimara in Thirthahalli taluk of Shivamogga district.

ತೀರ್ಥಹಳ್ಳಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 27 ವರ್ಷದ ಮೆಕ್ಯಾನಿಕ್ ಯುವಕ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಉಂಟೂರುಕಟ್ಟೆ ಕೈಮರ ಸಮೀಪ ನಡೆದಿದೆ.

ಮೃತ ಯುವಕನನ್ನು ತೀರ್ಥಹಳ್ಳಿ ತಾಲೂಕಿನ ಗುತ್ತಿಯಡೆಹಳ್ಳಿ ಅಂಚೆ ವ್ಯಾಪ್ತಿಯ ಹಳ್ಳಿಬೈಲು ಶೇಡ್ಯಾರ್ ಗ್ರಾಮದ ನಿವಾಸಿ ಆರ್.ಎನ್. ದೇವರಾಜ್ ಅವರ ಪುತ್ರ ಗಣೇಶ್ (27) ಎಂದು ಗುರುತಿಸಲಾಗಿದೆ. ಗಣೇಶ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು.

ಪೊಲೀಸ್ ವರದಿಯ ಪ್ರಕಾರ, ಗಣೇಶ್ ಅವರು ಸೆಪ್ಟೆಂಬರ್ 6ರಂದು ಸಂಜೆ ತಮ್ಮ ಪತ್ನಿಯ ತವರು ಮನೆಯಾದ ಕಾರ್ಕಳಕ್ಕೆ ತೆರಳಲು ಕೆಎ-14-ಇಎಫ್-0851 ನೋಂದಣಿ ಸಂಖ್ಯೆಯ ಟಿವಿಎಸ್ ಫಿನಿಕ್ಸ್ ಬೈಕ್‌ನಲ್ಲಿ ತೀರ್ಥಹಳ್ಳಿ ಮಾರ್ಗವಾಗಿ ಪ್ರಯಾಣಿಸುತ್ತಿದ್ದರು.

ಸಂಜೆ ಸುಮಾರು 5.45ರ ವೇಳೆಗೆ ಮುಳುಬಾಗಿಲು ಗ್ರಾಮದ ಉಂಟೂರುಕಟ್ಟೆ ಕೈಮರ ಸಮೀಪ ಆಗುಂಬೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬಂದ ಕೆಎ-14-ಜಿ-1747 ನೋಂದಣಿ ಸಂಖ್ಯೆಯ ಗಣೇಶ್ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಬಸ್ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಣೇಶ್ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ನಂತರ ಸ್ಥಳೀಯರು ಗಣೇಶ್ ಅವರನ್ನು ತಕ್ಷಣ ತೀರ್ಥಹಳ್ಳಿಯ ಎಸ್‌ಜೆಸಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿದ ವೇಳೆ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

60 minutes ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

5 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

5 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

20 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

20 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

1 day ago