POSTMAN NEWS

ನೈಜ ಸುದ್ದಿ ನೇರ ಬಿತ್ತರ..

ತೀರ್ಥಹಳ್ಳಿ ದಸರಾ ನಾಡಹಬ್ಬಕ್ಕೆ ₹18 ಲಕ್ಷ ಬಜೆಟ್: ಶಾಸಕ ಆರಗ ಜ್ಞಾನೇಂದ್ರ

Screenshot 2026 09 30 21 39 15 073 com.miui.gallery edit

ತೀರ್ಥಹಳ್ಳಿ ದಸರಾ ನಾಡಹಬ್ಬಕ್ಕೆ ₹18 ಲಕ್ಷ ಬಜೆಟ್: ಶಾಸಕ ಆರಗ ಜ್ಞಾನೇಂದ್ರ | Thirthahalli Dasara Nadahabba will be celebrated on a grand scale with an overall budget of ₹18 lakh, MLA Araga Jnanendra said at the preparatory meeting.

ತೀರ್ಥಹಳ್ಳಿ: ತೀರ್ಥಹಳ್ಳಿ ದಸರಾ ನಾಡಹಬ್ಬಕ್ಕೆ ಈ ಬಾರಿ ಒಟ್ಟು ₹18 ಲಕ್ಷ ಬಜೆಟ್‌ನಲ್ಲಿ ವಿಜೃಂಭಣೆಯಿಂದ ಆಚರಣೆ ನಡೆಸಲು ಸಿದ್ಧತೆ ಕೈಗೊಳ್ಳಲಾಗುವುದು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ತಾಲೂಕು ಆಡಳಿತ ಹಾಗೂ ಮುಜರಾಯಿ ಇಲಾಖೆ ವತಿಯಿಂದ ಆಯೋಜಿಸಿದ್ದ ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದಸರಾ ಆಚರಣೆಯ ಖರ್ಚು-ವೆಚ್ಚಗಳಲ್ಲಿ ಪಾರದರ್ಶಕತೆ ಕಾಪಾಡಬೇಕು. ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶವಾಗದಂತೆ ಹಣಕಾಸಿನ ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸುವುದು ಸೂಕ್ತ ಎಂದು ಶಾಸಕ ಆರಗ ಜ್ಞಾನೇಂದ್ರ ಸಲಹೆ ನೀಡಿದರು.

ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಮಾತನಾಡಿ, ಈ ಬಾರಿ ಸಾರ್ವಜನಿಕರಿಂದ ಹೆಚ್ಚಿನ ಪ್ರಮಾಣದ ದೇಣಿಗೆ ನಿರೀಕ್ಷಿಸಲು ಸಾಧ್ಯವಿಲ್ಲ. ಅಡಿಕೆ ಧಾರಣೆ ಕುಸಿದಿರುವ ಹಿನ್ನೆಲೆಯಲ್ಲಿ ಬೆಳೆಗಾರರು ಹಾಗೂ ಸಾರ್ವಜನಿಕ ವ್ಯಾಪಾರಸ್ಥರು ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.

ಪಟ್ಟಣ ವ್ಯಾಪ್ತಿಯಲ್ಲಿ ಗಣಪತಿ ಉತ್ಸವಗಳು ಅದ್ದೂರಿಯಾಗಿ ನಡೆಯುತ್ತಿದ್ದು, ಅದೇ ರೀತಿಯಲ್ಲಿ ದಸರಾ ನಾಡಹಬ್ಬವನ್ನೂ ಸಂಭ್ರಮದಿಂದ ಆಚರಿಸಬೇಕು ಎಂದು ಅವರು ತಿಳಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ಮಾತನಾಡಿ, ತೀರ್ಥಹಳ್ಳಿ ದಸರಾ ನಾಡಹಬ್ಬದ ಆಚರಣೆಗೆ ಪಟ್ಟಣ ಪಂಚಾಯಿತಿಯಿಂದ ₹3.5 ಲಕ್ಷ ನೀಡಲು ಸಿದ್ಧವಿರುವುದಾಗಿ ತಿಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ರಂಜಿತ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಚೀಂದ್ರ ಹೆಗಡೆ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ರಮೇಶ್, ರಾಮೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಲಿಗೆ ನಾಗರಾಜ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್, ದಸರಾ ಸಂಚಾಲಕರಾದ ಸಂದೇಶ್ ಜವಳಿ, ಸೊಪ್ಪುಗುಡ್ಡೆ ರಾಘವೇಂದ್ರ, ಅಮರನಾಥ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.