w
Headlines
Home » ಸಾಗರದ ವಾಣಿಶ್ರೀ ಆತ್ಮಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಆರೋಪಿ ಅಭಿಷೇಕ್

ಸಾಗರದ ವಾಣಿಶ್ರೀ ಆತ್ಮಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಆರೋಪಿ ಅಭಿಷೇಕ್

Screenshot 2026 09 22 10 30 30 007 com.openai.chatgpt edit

ಸಾಗರದ ವಾಣಿಶ್ರೀ ಆತ್ಮಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಆರೋಪಿ ಅಭಿಷೇಕ್ | Accused Abhishek has reportedly surrendered before HSR Layout police in Bengaluru in connection with the Vaanishree suicide case from Sagar taluk, Shivamogga.

ಶಿವಮೊಗ್ಗ: ಸಾಗರ ತಾಲ್ಲೂಕಿನ ಬ್ಯಾಕೊಡು ಗ್ರಾಮದ ಯುವತಿ ವಾಣಿಶ್ರೀ (22) ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಎ.ಕೆ. ಅಭಿಷೇಕ್ ಸೋಮವಾರ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ವಾಣಿಶ್ರೀ ಅವರ ಖಾಸಗಿ ಫೋಟೊ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಅಭಿಷೇಕ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಗರ ತಾಲ್ಲೂಕಿನ ಆರೋಡಿ ಗ್ರಾಮದ ವಾಣಿಶ್ರೀ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಸೆಕ್ಟರ್-1ರ ಪಿಜಿಯಲ್ಲಿ ವಾಸವಾಗಿದ್ದು, ಅಲ್ಲಿನ ಜ್ಯುವೆಲರಿ ಶೋರೂಂವೊಂದರಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು. ಶಿವಮೊಗ್ಗ ಮೂಲದ ಹಾಗೂ ವಾಣಿಶ್ರೀ ಅವರ ಪಿಯುಸಿ ಸಹಪಾಠಿಯಾಗಿದ್ದ ಅಭಿಷೇಕ್, ಆಕೆಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ವಾಣಿಶ್ರೀ ಅವರು ತಮ್ಮ ಖಾಸಗಿ ಫೋಟೊ ಮತ್ತು ವಿಡಿಯೊಗಳನ್ನು ಇಟ್ಟುಕೊಂಡು ವಾಟ್ಸ್‌ಆಪ್ ಮೂಲಕ ಕಿರುಕುಳ ನೀಡಲಾಗುತ್ತಿತ್ತು ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಾಣಿಶ್ರೀ ಅವರ ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ಅಭಿಷೇಕ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಇದೀಗ ಸೋಮವಾರ ವಕೀಲರ ಮೂಲಕ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಗೆ ಹಾಜರಾಗಿ ಶರಣಾಗಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

ಇದೇ ವೇಳೆ ವಾಣಿಶ್ರೀ ಸಾವಿಗೆ ಕಾರಣನಾಗಿದ್ದಾನೆಂದು ಆರೋಪಿಸಲಾಗಿರುವ ಅಭಿಷೇಕ್‌ನ ಬಂಧನಕ್ಕೆ ಆಗ್ರಹಿಸಿ, ಸಾವಿನ ದಿನದಿಂದಲೇ ಶಿವಮೊಗ್ಗ ಜಿಲ್ಲೆಯ ತುಮರಿ ಭಾಗದಲ್ಲಿ ಕೆಡಿಪಿ ಸದಸ್ಯ ಜಿ.ಟಿ. ಸತ್ಯನಾರಾಯಣ ಕರೂರು ನೇತೃತ್ವದಲ್ಲಿ ನಿರಂತರ ಪ್ರತಿಭಟನೆ ಹಾಗೂ ಹೋರಾಟಗಳು ನಡೆದಿದ್ದವು.

ಶಾಸಕ ಗೋಪಾಲಕೃಷ್ಣ ಬೇಳೂರು, ಅನಿತಾ ಕುಮಾರಿ ಸೇರಿದಂತೆ ಹಲವು ಗಣ್ಯರು ವಾಣಿಶ್ರೀ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಒತ್ತಾಯವೂ ಕೇಳಿಬಂದಿತ್ತು.

ಪ್ರಕರಣದ ತನಿಖೆಯನ್ನು ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಮುಂದುವರಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.