ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ
A woman was allegedly attacked and robbed of her gold chain while she was alone at home in Khandika village of Sagar taluk. Police have registered a case and launched an investigation
ಸಾಗರ : ತಾಲ್ಲೂಕಿನ ಖಂಡಿಕಾ ಗ್ರಾಮದಲ್ಲಿ ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿ, ಅವರ ಕತ್ತಿನಲ್ಲಿದ್ದ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದೆ. ಗೀತಾ ಅವರು ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ಆರೋಪಿ ಅಕ್ರಮವಾಗಿ ಮನೆಯೊಳಗೆ ಪ್ರವೇಶಿಸಿದ್ದಾನೆ ಎಂದು ತಿಳಿದುಬಂದಿದೆ.
ಬಳಿಕ ಗೀತಾ ಅವರ ಕತ್ತಿನಲ್ಲಿದ್ದ ಬಂಗಾರದ ಸರ ಕದಿಯಲು ಆರೋಪಿ ಮುಂದಾಗಿದ್ದಾನೆ. ಈ ವೇಳೆ ಗೀತಾ ಅವರು ಪ್ರತಿರೋಧ ವ್ಯಕ್ತಪಡಿಸಿದಾಗ, ಆರೋಪಿ ಅವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ, ಬಂಗಾರದ ಸರ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಹಲ್ಲೆಯಿಂದ ಗಾಯಗೊಂಡ ಗೀತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…