POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಹಲವರಿಗೆ ಗಾಯ

Screenshot 2026 10 02 15 07 14 714 com.openai.chatgpt edit

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಹಲವರಿಗೆ ಗಾಯ | Bus overturned after the driver lost control near Kalgala-Halakottige Cross in Sagara taluk, Shivamogga. Several people were injured and are receiving treatment at Thumari Hospital.

ಸಾಗರ: ಚಾಲಕನ ನಿಯಂತ್ರಣ ತಪ್ಪಿದ ಬಸ್‌ವೊಂದು ಪಲ್ಟಿಯಾಗಿ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಗಲ್–ಹಲಕೊಟ್ಟಿಗೆ ಕ್ರಾಸ್ ಬಳಿ ನಡೆದಿದೆ.

ದಾವಣಗೆರೆಯ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ನೌಕರರು ಪ್ರವಾಸಕ್ಕಾಗಿ ಕೊಲ್ಲೂರಿಗೆ ತೆರಳಿದ್ದರು. ಬಳಿಕ ಸಿಗಂದೂರು ಕಡೆಗೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಮೂರು–ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದ್ದು, ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ತುಮರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದು ಸ್ಥಳಕ್ಕೆ ಕಾರ್ಗಲ್ ಠಾಣೆ ಪೊಲೀಸರು ಆಗಮಿಸಿ ಗಾಯಾಳುಗಳಿಗೆ ನೆರವು ನೀಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಗಾಯಾಳುಗಳ ಸಂಪೂರ್ಣ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.