POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಅಕ್ರಮವಾಗಿ ಜಂಬಿಟ್ಟಿಗೆ ಸಾಗಾಟ; ಎರಡು ಲಾರಿಗಳು ವಶಕ್ಕೆ

ಅಕ್ರಮವಾಗಿ ಜಂಬಿಟ್ಟಿಗೆ ಸಾಗಾಟ; ಎರಡು ಲಾರಿಗಳು ವಶಕ್ಕೆ | Revenue officials led by Hosanagara Tahsildar Bharat Raj seized two lorries allegedly transporting jambittige illegally near Ripponpete in Shivamogga district.

ರಿಪ್ಪನ್‌ಪೇಟೆ: ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿ ಎರಡು ಲಾರಿಗಳನ್ನು ಜಪ್ತಿ ಮಾಡಿದೆ.

ರಿಪ್ಪನ್‌ಪೇಟೆ ಸಮೀಪದ ವಡಹೊಸಳ್ಳಿ ರಸ್ತೆಯಲ್ಲಿ ಅಧಿಕಾರಿಗಳು ನಿಗಾವಹಿಸಿದ್ದರು. ಈ ವೇಳೆ ಆನಂದಪುರ ಕಡೆಯಿಂದ ಆಗಮಿಸುತ್ತಿದ್ದ ಎರಡು ಲಾರಿಗಳನ್ನು ತಡೆದು ಪರಿಶೀಲನೆ ನಡೆಸಲಾಗಿದೆ.

ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅಗತ್ಯ ದಾಖಲೆಗಳಿಲ್ಲದೆ ನಿಯಮಬಾಹಿರವಾಗಿ ಜಂಬಿಟ್ಟಿಗೆ ಸಾಗಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡೂ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಜಪ್ತಿ ಮಾಡಲಾದ ಲಾರಿಗಳನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಭರತ್ ರಾಜ್ ಅವರೊಂದಿಗೆ ಕಂದಾಯ ಇಲಾಖೆಯ ಸಿಬ್ಬಂದಿಗಳಾದ ಗಣೇಶ್ ಹಾಗೂ ಶಿವಪ್ಪ ಪಾಲ್ಗೊಂಡಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.