ರಿಪ್ಪನ್ ಪೇಟೆ : ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಹರಿದ ಅಪರಿಚಿತ ವಾಹನ – ಎರಡು ದನಗಳು ಸಾವು | Two cattle were killed and two seriously injured after an unidentified vehicle allegedly hit a group of cattle near Ripponpete Police Station in Shivamogga district.
ರಿಪ್ಪನ್ಪೇಟೆ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಎರಡು ದನಗಳು ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೆರಡು ದನಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಿಪ್ಪನ್ಪೇಟೆ ಪೊಲೀಸ್ ಠಾಣೆ ಮುಂಭಾಗದಲ್ಲಿ ನಡೆದಿದೆ.
ರಸ್ತೆಯಲ್ಲಿ ದನಗಳ ಗುಂಪೊಂದು ಮಲಗಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ, ಬಹುಶಃ ಲಾರಿ, ದನಗಳ ಮೇಲೆ ಹರಿದು ಹೋಗಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡು ದನಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೆರಡು ದನಗಳಿಗೆ ಗಂಭೀರ ಗಾಯಗಳಾಗಿವೆ.
ಘಟನೆ ತಿಳಿಯುತ್ತಿದ್ದಂತೆ ಹಿಂದೂ ಜಾಗರಣಾ ವೇದಿಕೆಯ ದೇವರಾಜ್ ಕೆರೆಹಳ್ಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಗಾಯಗೊಂಡ ದನಗಳ ಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಪಶುವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ, ಗಾಯಗೊಂಡ ದನಗಳಿಗೆ ಸ್ಥಳದಲ್ಲೇ ಅಗತ್ಯ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದರು.
ರಸ್ತೆಯಲ್ಲಿ ಬಿಡಾಡಿ ದನಗಳು ಸಂಚರಿಸುವುದು ಹಾಗೂ ರಾತ್ರಿ ವೇಳೆ ವಾಹನಗಳ ಸಂಚಾರದ ಸಂದರ್ಭದಲ್ಲಿ ಅವುಗಳ ಸುರಕ್ಷತೆ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಅಪಘಾತದ ಬಳಿಕ ವಾಹನ ಸ್ಥಳದಿಂದ ತೆರಳಿರುವ ಹಿನ್ನೆಲೆಯಲ್ಲಿ, ಸಿಸಿಟಿವಿ ದೃಶ್ಯಾವಳಿಗಳು ಅಥವಾ ಇತರ ಸಾಕ್ಷ್ಯಗಳ ಮೂಲಕ ವಾಹನವನ್ನು ಪತ್ತೆಹಚ್ಚಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮೃತಪಟ್ಟ ಎರಡು ದನಗಳನ್ನು ಜಾಗರಣಾ ವೇದಿಕೆ ವತಿಯಿಂದ ಅಂತ್ಯಸಂಸ್ಕಾರ ನಡೆಸಲಾಯಿತು ಇನ್ನುಳಿದ ಎರಡು ದನಗಳನ್ನು ಗೋಶಾಲೆಗೆ ಬಿಡಲಾಗಿದೆ.
ಈ ಸಂಧರ್ಭದಲ್ಲಿ ಮಂಜುನಾಥ್ ಆಚಾರ್ , ಸಂಜಯ್ ಹಾಗೂ ಕಾರ್ತಿಕ್ ಇದ್ದರು.
































