w
Headlines
Home » ವರದಕ್ಷಿಣೆ ಕಿರುಕುಳ ಪ್ರಕರಣ: ಪತಿ, ಅತ್ತೆಗೆ 10 ವರ್ಷ ಕಠಿಣ ಜೈಲು

ವರದಕ್ಷಿಣೆ ಕಿರುಕುಳ ಪ್ರಕರಣ: ಪತಿ, ಅತ್ತೆಗೆ 10 ವರ್ಷ ಕಠಿಣ ಜೈಲು

Picsart 26 10 07 19 01 56 {"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"remove":1},"is_sticker":false,"edited_since_last_sticker_save":true,"containsFTESticker":false}

ವರದಕ್ಷಿಣೆ ಕಿರುಕುಳ ಪ್ರಕರಣ: ಪತಿ, ಅತ್ತೆಗೆ 10 ವರ್ಷ ಕಠಿಣ ಜೈಲು | Shivamogga court sentences husband and mother-in-law to 10 years rigorous imprisonment and imposes a fine in a dowry harassment and suicide case.

ಶಿವಮೊಗ್ಗ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ ಹಾಗೂ ಅತ್ತೆಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಜ್ಯೋತಿ (24) ಮೃತ ಮಹಿಳೆ. ಪತಿ ದಯಾನಂದ್ (37) ಹಾಗೂ ಅತ್ತೆ ಸುಮಿತ್ರಾ (65) ಹೆಚ್ಚುವರಿ ವರದಕ್ಷಿಣೆ ತರುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಕಿರುಕುಳದಿಂದ ಮನನೊಂದ ಜ್ಯೋತಿ ಅವರು 2021ರಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಅಂದಿನ ಡಿವೈಎಸ್ಪಿ ಶಾಂತವೀರ್ ಇ. ಅವರು ತನಿಖೆ ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಯಶವಂತ ಕುಮಾರ್ ಅವರು ಪತಿ ದಯಾನಂದ್ ಹಾಗೂ ಅತ್ತೆ ಸುಮಿತ್ರಾಗೆ ತಲಾ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹2,24,000 ದಂಡ ವಿಧಿಸಿದ್ದಾರೆ. ಅಲ್ಲದೆ, ಮೃತ ಜ್ಯೋತಿಯ ಕುಟುಂಬಕ್ಕೆ ₹2 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.