ಶಿವಮೊಗ್ಗದಲ್ಲಿ ಅ.29ರಂದು ಉದ್ಯೋಗ ಮೇಳ: ನೇರ ಸಂದರ್ಶನದ ಮೂಲಕ ಆಯ್ಕೆ | Shivamogga Job Fair 2026 on October 29 at 10 AM. Candidates aged 18–35 with PUC, ITI, Diploma or Degree qualifications can attend free direct interviews.
ಶಿವಮೊಗ್ಗ: ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 29ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಯೊಂದು ಭಾಗವಹಿಸಲಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಯಾರೆಲ್ಲ ಭಾಗವಹಿಸಬಹುದು?
ಪಿ.ಯು.ಸಿ., ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿರುವ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ನ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಉದ್ಯೋಗ ಮೇಳದ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗವನ್ನು ನೇರವಾಗಿ ಸಂಪರ್ಕಿಸಬಹುದು. ಅಥವಾ 9380663606 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
