ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಟರಾಜ್ ಬೆಂಗಳೂರಿಗೆ ವರ್ಗಾವಣೆ; ನೂತನ ಡಿಹೆಚ್ಒ ಆಗಿ ಡಾ. ಕಾಂತರಾಜ್ ನೇಮಕ | Dr. K.P. Kantaraj appointed as the new District Health Officer of Shivamogga, replacing Dr. Nataraj, who has been transferred to Bengaluru.
ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ. ನಟರಾಜ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಾಸನದ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ. ಕಾಂತರಾಜ್ ಕೆ.ಪಿ. ಅವರನ್ನು ನೇಮಕ ಮಾಡಲಾಗಿದೆ.
ಡಾ. ಕಾಂತರಾಜ್ ಕೆ.ಪಿ. ಅವರು ಈಗಾಗಲೇ ಶಿವಮೊಗ್ಗಕ್ಕೆ ಆಗಮಿಸಿದ್ದು, ನಿನ್ನೆ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಡಾ. ನಟರಾಜ್ ಅವರು ಕಳೆದ 2 ವರ್ಷ 8 ತಿಂಗಳಿನಿಂದ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
