
ರಿಪ್ಪನ್ಪೇಟೆ | ಚಿಕ್ಕಮ್ಮನ ಮನೆಗೆ ಹೋಗುವುದಾಗಿ ಹೇಳಿ ತೆರಳಿದ್ದ 18 ವರ್ಷದ ಯುವತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ | 18-year-old Aisha from Madina Colony, Ripponpete, has gone missing after leaving home for her aunt’s house in Soraba on November 28. Ripponpete police seek public help.
ರಿಪ್ಪನ್ಪೇಟೆ: ಸೊರಬದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ತೆರಳಿದ್ದ 18 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯಲ್ಲಿ ನಡೆದಿದೆ.
ರಿಪ್ಪನ್ಪೇಟೆಯ ಮದೀನಾ ಕಾಲೋನಿ ನಿವಾಸಿ ಶಬ್ಬೀರ್ ಅಹಮದ್ ಅವರ ಪುತ್ರಿ ಆಯಿಷಾ (18) ನಾಪತ್ತೆಯಾದ ಯುವತಿ.
ನವೆಂಬರ್ 28ರಂದು ಸೊರಬದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಹೋಗುವುದಾಗಿ ಮನೆಯವರಿಗೆ ತಿಳಿಸಿ ತೆರಳಿದ್ದ ಆಯಿಷಾ, ಬಳಿಕ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಯುವತಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ. ಕಾಣೆಯಾದ ಆಯಿಷಾ ಅವರ ಬಗ್ಗೆ ಯಾರಿಗಾದರೂ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ತಕ್ಷಣವೇ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಮಾಹಿತಿ ನೀಡಲು ಸಂಪರ್ಕ ಸಂಖ್ಯೆಗಳು:
ರಿಪ್ಪನ್ಪೇಟೆ ಪೊಲೀಸ್ ಠಾಣೆ: 08185-242635
ಮೊಬೈಲ್ ಸಂಖ್ಯೆ: 8277983045
ಪಿಎಸ್ಐ, ರಿಪ್ಪನ್ಪೇಟೆ: 9480803365
ಯುವತಿಯ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.
