ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ರಾಜುನಾಯ್ಕಗೆ ರಾಜ್ಯಮಟ್ಟದ ಅತ್ಯುತ್ತಮ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ | Dr. S. Rajunaik of Government First Grade College, Ripponpete, receives the Karnataka State Level Best NSS Programme Officer Award for 2023-24.
ರಿಪ್ಪನ್ಪೇಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ಪೇಟೆಯಲ್ಲಿ ಆಯ್ಕೆ ಶ್ರೇಣಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜುನಾಯ್ಕ ಎಸ್. ಅವರು 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ರಾಜ್ಯ ಮಟ್ಟದ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
2023-24ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಳೆಹೊನ್ನೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಯಾಗಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಎನ್ಎಸ್ಎಸ್ ಘಟಕ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ.
ಎನ್ಎಸ್ಎಸ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ, ಶಿಸ್ತು ಹಾಗೂ ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವ ನಿಟ್ಟಿನಲ್ಲಿ ಡಾ. ರಾಜುನಾಯ್ಕ ಎಸ್. ಅವರು ನಿರಂತರವಾಗಿ ಶ್ರಮಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ, ಆರೋಗ್ಯ ಜಾಗೃತಿ, ಪರಿಸರ ಸಂರಕ್ಷಣೆ, ಸಾಮಾಜಿಕ ಅರಿವು ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
ಡಾ. ರಾಜುನಾಯ್ಕ ಎಸ್. ಅವರ ಈ ಸಾಧನೆಗೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಎನ್ಎಸ್ಎಸ್ ಸ್ವಯಂಸೇವಕರು ಮತ್ತು ವಿದ್ಯಾರ್ಥಿಗಳು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
