
ಹೆದ್ದಾರಿಪುರ ಬಳಿ ಭೀಕರ ಅಪಘಾತ: ವಿಜಯವಾಣಿ ಪೇಪರ್ ಸಾಗಿಸುತ್ತಿದ್ದ ಕಾರು ಪಲ್ಟಿ – ಓರ್ವ ಸಾವು ,ಇನ್ನೋರ್ವ ಗಂಭೀರ | One person died and another was critically injured after a car carrying newspapers overturned near Jamballi Turn at Heddaripura, near Ripponpete, Shivamogga district.
ರಿಪ್ಪನ್‌ಪೇಟೆ: ಶಿವಮೊಗ್ಗದಿಂದ ದಿನಪತ್ರಿಕೆಗಳನ್ನು ಸಾಗಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರದ ಜಂಬಳ್ಳಿ ತಿರುವಿನಲ್ಲಿ ನಡೆದಿದೆ.
ಅಪಘಾತದಲ್ಲಿ ಶಿವಮೊಗ್ಗದ ಬೊಮ್ಮನಕಟ್ಟೆಯ ನಿವಾಸಿ ಶಿವಕುಮಾರ್ (45) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಗಾಯಗೊಂಡ ವ್ಯಕ್ತಿ ರಿಪ್ಪನ್ ಪೇಟೆ ತೀರ್ಥಹಳ್ಳಿ ರಸ್ತೆಯಲ್ಲಿರುವ ಕೋಳಿ ಫಾರಂ ನಲ್ಲಿ ಕಾರ್ಯ ನಿರ್ವಹಿಸುವ ತೀರ್ಥಹಳ್ಳಿ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ
ಶಿವಮೊಗ್ಗದಿಂದ ವಿಜಯವಾಣಿ ದಿನಪತ್ರಿಕೆಗಳನ್ನು ತೀರ್ಥಹಳ್ಳಿಗೆ ತಲುಪಿಸಿ, ಬಳಿಕ ರಿಪ್ಪನ್‌ಪೇಟೆಗೆ ಬರುತ್ತಿದ್ದ ವೇಳೆ ಜಂಬಳ್ಳಿ ತಿರುವಿನ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಶಿವಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವಿಗೆ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
