ನ.21ರಂದು ಹೊಸನಗರದಲ್ಲಿ ಪ್ರಜಾಸೇವಾ ಆಂದೋಲನ ಸಭೆ | Hosanagara Taluk-level Prajaseva Andolana meeting will be held on November 21 under the chairmanship of Shivamogga District Minister S. Madhu Bangarappa.
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21ರ ಶನಿವಾರ ಬೆಳಿಗ್ಗೆ 9.30ಕ್ಕೆ ಹೊಸನಗರ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ನಡೆಯಲಿದೆ.
ಹೊಸನಗರದ ಈಡಿಗರ ಭವನದಲ್ಲಿ ಸಭೆ ಆಯೋಜಿಸಲಾಗಿದ್ದು, ತಾಲೂಕು ಮಟ್ಟದ ಸಾರ್ವಜನಿಕರ ಅಹವಾಲುಗಳನ್ನು ಆಲಿಸುವುದರ ಜೊತೆಗೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶ ಹೊಂದಿದೆ.
ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸಲ್ಲಿಸುವುದರ ಜೊತೆಗೆ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ. ನಿಟ್ಟಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
