ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನಾಚರಣೆ: ಹೊಸನಗರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ | A special devotional bhajana programme was organized at Sri Mahaganapathi Temple in Hosanagara on November 25, 2026, to mark the birthday of Dharmadhikari Dr. Veerendra Heggade and pray for his good health and long life.
ಹೊಸನಗರ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಅವರ ಆಯುಷ್ಯ ಮತ್ತು ಆರೋಗ್ಯ ವೃದ್ಧಿಗಾಗಿ ಹೊಸನಗರದಲ್ಲಿ ವಿಶೇಷ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ನವೆಂಬರ್ 25, 2026ರಂದು ಮಂಜುನಾಥೇಶ್ವರ ಭಜನಾ ಪರಿಷತ್, ಹೊಸನಗರ ವತಿಯಿಂದ ಕಾರಣಗಿರಿ ವಲಯದ ಎಲ್ಲಾ ಭಜನಾ ತಂಡಗಳ ಸಹಯೋಗದಲ್ಲಿ ಚಿಕ್ಕಪೇಟೆ ನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ಉಮೇಶ್, ಕಾರಣಗಿರಿ ವಲಯ ಭಜನಾ ಪರಿಷತ್ ಅಧ್ಯಕ್ಷ ದೇವೇಂದ್ರ ಹಾಗೂ ವಲಯದ ಭಜನಾ ತರಬೇತುದಾರ ಸುಧಾಕರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ಮತ್ತು ಪ್ರೋತ್ಸಾಹ ನೀಡಿದರು. ಅಲ್ಲದೆ, ಪೂಜ್ಯ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಶುಭ ಹಾರೈಸಿದರು.
ಭಜನಾ ಪರಿಷತ್‌ನ ವಿವಿಧ ತಂಡಗಳ ಸದಸ್ಯರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
