w
Headlines
Home » ನ. 23ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ

ನ. 23ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ

Screenshot 2026 11 12 19 07 50 907 com.picsart.studio edit

ನ. 23ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ | Karthika Deepotsava will be celebrated at Malali Math in Thirthahalli taluk on November 23, 2026, in the divine presence of Rambhapuri Jagadguru Veerasomeshwara Swamiji.

ರಿಪ್ಪನ್‌ಪೇಟೆ: ತೀರ್ಥಹಳ್ಳಿ ತಾಲೂಕಿನ ಶ್ರೀಮನ್ ಮಹಾಸಂಸ್ಥಾನ ಮಳಲಿ ಮಠದಲ್ಲಿ ನವೆಂಬರ್ 23ರ ಸೋಮವಾರ ಸಂಜೆ 5 ಗಂಟೆಗೆ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ ನಡೆಯಲಿದೆ. ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಶಾಸಕರಾದ ಅರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥಗೌಡ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ ಹಾಗೂ ಹರತಾಳು ಹಾಲಪ್ಪ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದು, ಬಂಕಾಪುರದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಸಮ್ಮುಖ ವಹಿಸಲಿದ್ದಾರೆ. ಕವಲೇದುರ್ಗದ ಮರುಳಸಿದ್ಧ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡಲಿದ್ದಾರೆ. ಮಳಲಿ ಸಂಸ್ಥಾನ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಹಲವು ಗಣ್ಯರಿಗೆ ಗುರುರಕ್ಷೆ :

ಸಮಾರಂಭದಲ್ಲಿ ಜಗದ್ಗುರು ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ, ಹೊಸನಗರದ ಡಿ.ಆರ್. ವಿನಯಕುಮಾರ್ ದುಮ್ಮ, ಹಾಲಗುಡ್ಡೆಯ ಎಚ್.ಎನ್. ಯೋಗಮೇಶಗೌಡ್ರು, ಹೊಸನಗರದ ಈಶ್ವರಪ್ಪಗೌಡರು, ಕಮದೂರಿನ ಕೆ.ವಿ. ಪರಮೇಶಗೌಡರು, ಹುಗಡಿಯ ಡಾ. ಶಶಿಕಾಂತ ಎಚ್.ಸಿ. ಹಾಗೂ ಕಗ್ಗಲಿಯ ಡಾ. ಸುಧೀನ ಪಾಟೀಲ ಅವರಿಗೆ ಗುರುರಕ್ಷೆ ನೀಡಲಾಗುವುದು.

ಇದೇ ಸಂದರ್ಭದಲ್ಲಿ ತೊಗರ್ಸಿ ಪಂಚವಣ್ಣಿಗೆಮಠ, ಶಾಂತಪುರ, ಬಿಳಕಿ, ಕೋಣಂದೂರು, ಸಂಗೊಳ್ಳಿ, ತಾವರೆಕೆರೆ, ದುಗ್ಲಿ-ಕಡೇನಂದಿಹಳ್ಳಿ, ಹಣಮಾಪುರ, ಹಾರನಹಳ್ಳಿ ಹಾಗೂ ಸಿಂದಗಿ ಮಠಗಳ ಶಿವಾಚಾರ್ಯರು ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ

ಅಂದು ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ, ಶ್ರೀ ಆದಿಗುರು ನಾಗಾರ್ಜುನ ಶಿವಾಚಾರ್ಯರು ಸೇರಿದಂತೆ ಲಿಂಗೈಕ್ಯ ಶಿವಾಚಾರ್ಯರ ಕರ್ತೃ ಗದ್ದುಗೆಗಳಿಗೆ ಹಾಗೂ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ಮಹಾ ರುದ್ರಾಭಿಷೇಕ ನೆರವೇರಲಿದೆ.

ಶ್ರೀ ಚೌಡೇಶ್ವರಿ ದೇವಿಗೆ ಸಹಸ್ರ ಕುಂಕುಮಾರ್ಚನೆ, ಹೋಮ-ಹವನಗಳು ಹಾಗೂ ಶ್ರೀ ಗುರುಗಳ ಪಾದಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.

ಕಾರ್ತಿಕ ದೀಪೋತ್ಸವ ಹಾಗೂ ಧರ್ಮ ಸಮಾರಂಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ಶ್ರೀ ಮಠದ ಪ್ರಕಟಣೆ ತಿಳಿಸಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.