ಪತ್ನಿಯ ನಿಧನದ ಬಳಿಕ ಮಾನಸಿಕ ಖಿನ್ನತೆ; ಕಲ್ಲೂರು ಗ್ರಾಮದಲ್ಲಿ ಶೇಷಪ್ಪ ಗೌಡ ನೇಣು ಬಿಗಿದುಕೊಂಡು ಸಾವು | A man identified as Sheshappa Gowda died by suic-ide at his home in Kalluru village under Heddaripura Gram Panchayat limits near Ripponpete. Police have registered a case.
ರಿಪ್ಪನ್ಪೇಟೆ: ಪತ್ನಿಯ ನಿಧನದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದಿದೆ.
ಕಲ್ಲೂರು ಗ್ರಾಮದ ನಿವಾಸಿ ಶೇಷಪ್ಪ ಗೌಡ (78) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಶೇಷಪ್ಪ ಗೌಡ ಅವರ ಪತ್ನಿ ಇತ್ತೀಚೆಗೆ ನಿಧನರಾಗಿದ್ದರು. ಪತ್ನಿಯ ಅಗಲಿಕೆಯ ಬಳಿಕ ಅವರು ಮಾನಸಿಕವಾಗಿ ನೊಂದಿದ್ದು, ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ರಿಪ್ಪನ್ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
