w
Headlines
Home » ಶಿಕಾರಿಪುರ | ಹೋರಿ ಹಬ್ಬ ವೀಕ್ಷಿಸುತ್ತಿದ್ದ ವ್ಯಕ್ತಿಗೆ ಹೋರಿ ತಿವಿತ – ವ್ಯಕ್ತಿ ಸಾವು

ಶಿಕಾರಿಪುರ | ಹೋರಿ ಹಬ್ಬ ವೀಕ್ಷಿಸುತ್ತಿದ್ದ ವ್ಯಕ್ತಿಗೆ ಹೋರಿ ತಿವಿತ – ವ್ಯಕ್ತಿ ಸಾವು

Screenshot 2026 11 16 17 22 31 216 com.openai.chatgpt edit

ಶಿಕಾರಿಪುರ | ಹೋರಿ ಹಬ್ಬ ವೀಕ್ಷಿಸುತ್ತಿದ್ದ ವ್ಯಕ್ತಿಗೆ ಹೋರಿ ತಿವಿತ – ವ್ಯಕ್ತಿ ಸಾವು | A 48-year-old man, Arun, died after being gored by a bull while watching a Hori festival in Churchugundi village of Shikaripura taluk, Shivamogga district.

ಶಿಕಾರಿಪುರ: ಹೋರಿ ಹಬ್ಬದ ಸ್ಪರ್ಧೆಯನ್ನು ವೀಕ್ಷಿಸಲು ತೆರಳಿದ್ದ ವ್ಯಕ್ತಿಯೊಬ್ಬರು ಹೋರಿ ದಾಳಿಗೆ ಬಲಿಯಾಗಿರುವ ಘಟನೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಚುರ್ಚುಗುಂಡಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಹೋರಿ ಹಬ್ಬದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಅರುಣ್ (48) ಮೃತಪಟ್ಟ ದುರ್ದೈವಿ.

ಚುರ್ಚುಗುಂಡಿಯಲ್ಲಿ ಆಯೋಜಿಸಲಾಗಿದ್ದ ಹೋರಿ ಹಬ್ಬವನ್ನು ವೀಕ್ಷಿಸಲು ಅರುಣ್ ತೆರಳಿದ್ದರು. ಈ ವೇಳೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹೋರಿ ಏಕಾಏಕಿ ಅವರ ಮೇಲೆ ಎರಗಿ ತಿವಿದಿದೆ. ಪರಿಣಾಮ ಅರುಣ್ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ , ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೋರಿ ಹಬ್ಬಕ್ಕೆ ಮತ್ತೊಂದು ಬಲಿ:

ಇತ್ತೀಚೆಗಷ್ಟೇ ಗುರುವಾರ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿ ಹಬ್ಬದ ಸ್ಪರ್ಧೆಯನ್ನು ಮನೆಯ ಬಾಗಿಲಿನಲ್ಲಿ ನಿಂತು ವೀಕ್ಷಿಸುತ್ತಿದ್ದ ಈರಪ್ಪ (84) ಎಂಬ ವೃದ್ಧರಿಗೂ ಹೋರಿ ತಿವಿದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದರು.

ಹೋರಿ ಹಬ್ಬದ ಸಂದರ್ಭದಲ್ಲಿ ಸಂಭವಿಸುತ್ತಿರುವ ಸತತ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಇಂತಹ ಸ್ಪರ್ಧೆಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವನ್ನು ಮತ್ತೆ ಮುನ್ನೆಲೆಗೆ ತಂದಿವೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.