ಶಿವಮೊಗ್ಗ ಜಿಲ್ಲೆಯಲ್ಲಿ 43 ಗ್ರಾಮ ಒನ್ ಕೇಂದ್ರಗಳ ನಿರ್ವಹಣೆಗೆ ಅರ್ಜಿ ಆಹ್ವಾನ; ನ.15 ಕೊನೆಯ ದಿನ | Applications invited for the management of 43 vacant Grama One centres in Shivamogga district. Eligible candidates can apply online before November 15, 2026.
ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ 43 ಗ್ರಾಮ ಒನ್ ಕೇಂದ್ರಗಳ ನಿರ್ವಹಣೆಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಗ್ರಾಮೀಣ ಜನರಿಗೆ ಒದಗಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಸುಲಭವಾಗಿ ತಲುಪಿಸಲಾಗುತ್ತಿದೆ.
ಅಲ್ಲದೆ, ಸೇವಾ ಸಿಂಧು ಜಾಲತಾಣದ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಸೇವೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣವಾದ https://sevaone.karnataka.gov.in/services/login ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಇತರೆ ಯಾವುದೇ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು 2026ರ ನವೆಂಬರ್ 15 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದ್ದಾರೆ.
