w
Headlines
Home » ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ತಂದೆಗೆ ಚಾಕುವಿನಿಂದ ಇರಿದು ಕೊಲೆ ಯತ್ನ: ಇಬ್ಬರು ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ, ₹1.62 ಲಕ್ಷ ದಂಡ!

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ತಂದೆಗೆ ಚಾಕುವಿನಿಂದ ಇರಿದು ಕೊಲೆ ಯತ್ನ: ಇಬ್ಬರು ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ, ₹1.62 ಲಕ್ಷ ದಂಡ!

Screenshot 2026 11 28 18 32 05 551 com.android.chrome edit
File 0000000033808211b07f2bede23892e7

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ತಂದೆಗೆ ಚಾಕುವಿನಿಂದ ಇರಿದು ಕೊಲೆ ಯತ್ನ: ಇಬ್ಬರು ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ, ₹1.62 ಲಕ್ಷ ದಂಡ! | Shivamogga court sentences two accused to rigorous imprisonment and fines for sexually harassing a minor girl and attempting to murder her father.

ಶಿವಮೊಗ್ಗ: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಇದನ್ನು ವಿರೋಧಿಸಿದ ಬಾಲಕಿಯ ತಂದೆಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಮೊದಲನೇ ಆರೋಪಿಯಾದ 27 ವರ್ಷದ ವ್ಯಕ್ತಿ, 16 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಕೃತ್ಯವನ್ನು ವಿರೋಧಿಸಿದ ಬಾಲಕಿಯ ತಂದೆಯ ಮೇಲೆ ತನ್ನ ಸ್ನೇಹಿತನೊಂದಿಗೆ ಸೇರಿ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ.

ಈ ಸಂಬಂಧ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪಿಎಸ್‌ಐ ವಿ. ಶಿವಪ್ರಸಾದ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

ನ್ಯಾಯಾಲಯದ ತೀರ್ಪಿನ ವಿವರ:

ಮೊದಲನೇ ಆರೋಪಿ: 4 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.21 ಲಕ್ಷ ದಂಡ.ಎರಡನೇ ಆರೋಪಿ: 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹41 ಸಾವಿರ ದಂಡ , ಇದಲ್ಲದೆ, ದಂಡದ ಮೊತ್ತದಲ್ಲಿ ನೊಂದ ಬಾಲಕಿಗೆ ₹1 ಲಕ್ಷ ಪರಿಹಾರ ನೀಡಲು ಹಾಗೂ ಸರ್ಕಾರದಿಂದ ಹೆಚ್ಚುವರಿಯಾಗಿ ₹10 ಸಾವಿರ ಪರಿಹಾರ ಒದಗಿಸಲು ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕ ಶ್ರೀಧರ್ ಅವರು ವಾದ ಮಂಡಿಸಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.