
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ ಹಿಂದಿನ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ ಸಭೆ ನಡೆಯಿತು.ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ರಿಪ್ಪನ್ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2025 ರ 58ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 58 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್ಪೇಟೆಯ…
ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು : ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ,…
ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ…
ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…
28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ ರಿಪ್ಪನ್ ಪೇಟೆ : ಕಳೆದ 28 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ…
ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು : ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಭಾನುವಾರ ಪಟ್ಟಣದ ವಿಶ್ವಮಾನವ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್…
ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಜು. 13 ರ ಬೆಳಿಗ್ಗೆ ನಡೆದಿದೆ. ಮಹಮ್ಮದ್ ತಮೀಮ್(4) ಗಾಯಗೊಂಡ ಬಾಲಕನಾಗಿದ್ದಾನೆ. ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ…
ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…