Headlines

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಶಿವಮೊಗ್ಗ : ಟಿಪ್ಪು ನಗರದಲ್ಲಿ ಮಾರಾಮಾರಿ ಒಬ್ಬನ ಕೊಲೆ

ಶಿವಮೊಗ್ಗ: ನಗರದ ಟಿಪ್ಪುನಗರ ವಾಸಿಯಾದ ಟ್ವಿಸ್ಟ್ ಇಮ್ರಾನ್ ಎಂಬ ಯುವಕನ ಬರ್ಬರ ಹತ್ಯೆಯಾಗಿದೆ.  ರಾತ್ರಿ 9-15 ರ ಸುಮಾರಿನಲ್ಲಿ  ಕೆ.ಕೆ.ಶೆಡ್ ನ ಬಳಿ ಈ ಘಟನೆ ನಡೆದಿದೆ.  ಕೊಲೆಯಾದ ಟ್ವಿಸ್ಟ್  ಇಮ್ರಾನ್ ನ ಶವ ಚರಂಡಿಯಲ್ಲಿ ದೊರಕಿದ್ದು ದೇಹದ ಎಡಭಾಗದ ಅಲ್ಲಲ್ಲಿ  ಚೂರಿಯಿಂದ ಇರಿದ ಗಾಯಗಳೊಂದಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಆರೋಪಿಗಳ ಜಾಡು ಹಿಡಿದು ಬಲೆ ಬೀಸಿದ್ದಾರೆ. ಶವವನ್ನು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.  ಗಾಂಜಾ ಘಾಟು ಗಾಂಜಾ ಪೆಡ್ಲರ್ ನನ್ನ…

Read More

ಶರಾವತಿ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ|sharavathi

ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.  ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ…

Read More

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್‌ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…

Read More

ಕುಗ್ರಾಮ ಬುಲ್ಡೋಜರ್ ಗುಡ್ಡ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ – ಹಳ್ಳಿಯ ಕಡೆ ಕಾರ್ಯಕ್ರಮ :

ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯೇ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದ ಮೂಲ ಉದ್ದೇಶ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಅಯೋಜಿಸಲಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ…

Read More

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ. ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳ…

Read More

ಪತಿಯಿಂದಲೇ ಪತ್ನಿಯ ಹತ್ಯೆ..!! | Crime News

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಪತ್ನಿಯನ್ನ ಪತಿಯೊಬ್ಬ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಕಳೆದ ಬುಧವಾರ ಈ ಘಟನೆ ನಡೆದಿದ್ದು, ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದೆ.  ರಮ್ಯಾ (೩೬) ಹತ್ಯೆಯಾಗಿದ್ದು, ಈಕೆಯ ಪತಿ ನಾಗಭೂಷಣ್ ಎಂಬುವರು ಹತ್ಯೆ ಮಾಡಿರುವುದಾಗಿ ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ನಾಗಭೂಷಣ್ ಆಟೋ ಚಾಲಕನಾಗಿದ್ದು, ದಂಪತಿಗೆ ಸುಮಾರು ೧೬ ವರ್ಷ ವಯಸ್ಸಿನ ಪುತ್ರ ಇದ್ದಾನೆ. ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು…

Read More

ಸೊಸೆಯಿಂದ ಅತ್ತೆಯ ಚಿನ್ನಾಭರಣ ಮತ್ತು ಹಣ ಕಳುವು – ಇಬ್ಬರ ಬಂಧನ|theft

ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನಲೆ : ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

ಮಲೆನಾಡಿನಲ್ಲಿ ಮನೆ ಮುರಿದರೇ ಪೊಲೀಸರು ?? ಪೊಲೀಸರ ಗೂಂಡಾ ವರ್ತನೆಯ ಆರೋಪಕ್ಕೆ ಕಡೂರು ಪಿಎಸ್ಸೈ ರಮ್ಯಾ ಹೇಳಿದ್ದೇನು !!

ಮಲೆನಾಡಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಗೂಂಡಾ ವರ್ತನೆ ತೊರಿದ್ದು. ಮನೆಯ ಬಾಗಿಲು, ಹಂಚು ಮುರಿದು ರೌಡಿಗಳಂತೆ ಪೊಲೀಸರು ಮನೆಯ ಒಳ ಭಾಗವನ್ನು ಪ್ರವೇಶಿಸಿದ್ದಾರೆ ಎಂದು ಕುಟುಂಬದ ಸದಸ್ಯರಿಂದ ಪೋಲಿಸರ ಮೇಲೆ  ಆರೋಪ ಕೇಳಿಬಂದಿದೆ. ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದರು.  ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ 7 ಜನರನ್ನ ಖಾಕಿ ಪಡೆ ಎಳೆದೊಯ್ದಿದ್ದಾರೆ ಎಂದು ಕುಟುಂಬದ ಓರ್ವ ಸದಸ್ಯರು ಆರೋಪಿಸಿದ್ದಾರೆ.ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ….

Read More

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…

Read More